ವಿಜಯನಗರ | ವಿದ್ಯಾರ್ಥಿಗಳಿಗೆ ನಾವೆಲ್ಲ ಒಂದೇಯೆಂಬ ಭಾವನೆಯಿರಬೇಕು: ಕುಲಪತಿ ಡಿ ವಿ ಪರಮಶಿವಮೂರ್ತಿ

Date:

ವಿದ್ಯಾರ್ಥಿಗಳಿಗೆ ನಾವೆಲ್ಲ ಒಂದೇಯೆಂಬ ಭಾವನೆಯಿರಬೇಕು. ಯಾವುದೇ ಪ್ರತ್ಯೇಕತೆಯ ಭಾವ ನಿಮ್ಮಲ್ಲಿರಬಾರದು ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.

“ವಿದ್ಯಾ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೆಲ್ಲ ಒಂದೇ. ಆದರೆ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಗಾಬರಿ, ಬೆದರಿಕೆಯ ವಿಷಮ ಪರಿಸ್ಥಿತಿಗಳು ಸೃಷ್ಟಿಯಾಗುತ್ತಿವೆ. ಇದಕ್ಕೆ ಹಲವು ಕಾರಣಗಳಿವೆ. ಇದರಲ್ಲಿ, ನಿಜ ಎಷ್ಟೋ, ಸುಳ್ಳು ಎಷ್ಟೋ, ಗೊಂದಲವೆಷ್ಟೋ ಗೊತ್ತಿಲ್ಲ. ಇವುಗಳಿಗೆ ಕನ್ನಡ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಗಮನ ಕೊಡದೆ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಸಂವಿಧಾನದ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಅನುದಾನದ ಅಡಿಯಲ್ಲಿ ಹಾಸ್ಟೆಲ್ ವ್ಯವಸ್ಥೆ ಮಾಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹಂಪಿ ಕನ್ನಡ ವಿವಿ

“ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ಗೆ ಬೇಕಾದ ಮೂಲ ಸೌಕರ್ಯಗಳನ್ನು ಈಗಾಗಲೇ ವಿಶ್ವವಿದ್ಯಾಲಯವು ತನ್ನ ಆರ್ಥಿಕ ಇತಿಮಿತಿಯಲ್ಲಿ ಕಲ್ಪಿಸಿದೆ. ಕಾಲಕಾಲಕ್ಕೆ ಸರ್ಕಾರದಿಂದ ಇನ್ನೂ ಬೇಕಾದ ಸೌಲಭ್ಯಗಳನ್ನು ಹಾಸ್ಟೆಲ್‌ಗೆ ಒದಗಿಸಲು ವಿಶ್ವವಿದ್ಯಾಲಯವು ಕೆಲಸ ಮಾಡಲು ಬದ್ಧವಾಗಿದೆ. ಇದಕ್ಕೆಲ್ಲ ಸರ್ಕಾರದ ಎಲ್ಲ ಅಧಿಕಾರಿಗಳು, ವಿಶ್ವವಿದ್ಯಾಲಯದ ಸಿಬ್ಬಂದಿಗಳು ಹಾಗೂ ಹಾಸ್ಟೆಲಿನ ವಿದ್ಯಾರ್ಥಿಗಳು ಕಾರಣ” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಲೆಗೆ ವಿದ್ಯುತ್ ಸಂಪರ್ಕವಿಲ್ಲ; ವಿದ್ಯಾರ್ಥಿಗಳು ಡಿಜಿಟಲ್ ತರಗತಿಗಳಿಂದ ವಂಚಿತ

ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕ್ಷೇಮಪಾಲನಾಧಿಕಾರಿ ಡಾ. ವೆಂಕಟಗಿರಿ ದಳವಾಯಿ ಮಾತನಾಡಿ, “ಅಲ್ಪಸಂಖ್ಯಾತ ಸಮುದಾಯಗಳು ಉನ್ನತ ಶಿಕ್ಷಣದಲ್ಲಿ ಬಹಳ ಹಿಂದೆ ಉಳಿದಿವೆ. ಒಬ್ಬ ಅಲ್ಪಸಂಖ್ಯಾತ ವಿದ್ಯಾರ್ಥಿ ಪರಿಶ್ರಮ ನಿಷ್ಠೆಯಿಂದ ಶಿಕ್ಷಣ ಪಡೆದು ಯಶಸ್ವಿಯಾದರೇ ಅವನಿಂದ ಇಡೀ ಅವನ ಮನೆತನ ಅಲ್ಲದೆ ಅವನ ಮುಂದಿನ ಪೀಳಿಗೆಯೂ ಉನ್ನತವಾದ ಬದುಕು ಪಡೆಯುತ್ತದೆ. ಈ ಕುರಿತು ವಿದ್ಯಾರ್ಥಿಗಳಿಗೆ ಸದಾ ಎಚ್ಚರಿಕೆ ಇರಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...