ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

Date:

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಸಾಮಾನ್ಯ ರೈತರಿಗೆ ನೀಡಲಾಗುತ್ತಿದ್ದ ತಾಡಪಲ್‌ ದರವು ₹950 ಇತ್ತು. ಈ ವರ್ಷ ₹1670 ಆಗಿದೆ. ಎಸ್‌ಸಿ-ಎಸ್‌ಟಿ ಸಮುದಾಯದ ರೈತರಿಗೆ ₹250 ಇದ್ದ ತಾಡಪಲ್ ದರವು, ಈ ವರ್ಷ ₹570 ರೂಪಾಯಿಗೆ ಹೆಚ್ಚಿಸಿದ್ದಾರೆ. ರೈತರ ಗಾಯದ ಮೇಲೆ ಸರಕಾರ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೂವಿನ ಹಡಗಲಿ ತಾಲೂಕು ಬರಪೀಡಿತಗೊಂಡಿದ್ದು, ರೈತರು ಕಷ್ಟ ಅನುಭವಿಸತ್ತಿದ್ದಾರೆ. ಸರಕಾರವೇ ಬರಪೀಡಿತ ತಾಲೂಕು ಎಂದು ಸರಕಾರ ಘೋಷಣೆ ಮಾಡಿದೆ. ಆದರೂ ಇಂತಹ ನಿರ್ಧಾರಕ್ಕೆ ಮುಂದಾಗಿರುವುದು ಅಕ್ಷಮ್ಯ. ರೈತರು ಸಮಸ್ಯೆ ಎದುರಿಸುತ್ತಿರುವಾಗ ಸರಕಾರ ಏಕಾಏಕಿ ದರ ಹೆಚ್ಚಿಸಿ ಮಣ್ಣು ಮುಕ್ಕಿಸುವ ಕೆಲಸ ಮಾಡಿದೆ ಎಂದು ರೈತರು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಎತ್ತಿನಹೊಳೆ | ಮುಖ್ಯಮಂತ್ರಿ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ದಿಢೀರ್‌ ಕುಸಿತ

ಹಿಂದೆ ಇದ್ದ ಬೆಲೆಗೆ ಮತ್ತು ಗುಣಮಟ್ಟದ ತಾಡಪಲ್ ವಿತರಿಸಬೇಕು ಎಂದು ರೈತರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಈ ವೇಳೆ ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ, ಜಿಲ್ಲಾಧ್ಯಕ್ಷರು ಸೋಮಶೇಖರಪ್ಪ , ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಚನ್ನವೀರಮ್ಮ, ದುರ್ಗಪ್ಪ, ಶಿವನಾಗಪ್ಪ, ಗಿರೀಶ್, ಮಂಜುನಾಥ್,ಮೈಲಾರ, ಶರಣಪ್ಪ, ಶಂಕರಗೌಡ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...