ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೇಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Date:

ಧರ್ಮಸ್ಥಳ ಸಂಘ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಳ್ಳಾರಿ ಕ್ಯಾಂಪ್‌ನಲ್ಲಿ ನಡೆದಿದೆ.

ಬಳ್ಳಾರಿ ಕ್ಯಾಂಪ್‌ ನಿವಾಸಿ ಅಕ್ರಮ್‌ ಎಂಬುವವರ ಹೆಂಡತಿ ಆಫ್ರಿನ್ ಬಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ ಎಂದು ತಿಳಿದುಬಂದಿದೆ.

ಹರಪನಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಧರ್ಮಸ್ಥಳ ಸಂಘ ಹಾಗೂ ಎಲ್ ಆಂಡ್ ಟಿ ಫೈನಾನ್ಸ್‌ನಿಂದ ಸಾಲ ಪಡೆದಿದ್ದಾರೆಂದು ತಿಳಿದು‌ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ಥ ಮಹಿಳೆ ಆಫ್ರಿನ್ ಮಾತನಾಡಿ, “ನಮಗೆ ಒಂದೊತ್ತಿನ ಊಟಕ್ಕೂ ಕಷ್ಟಪಡುವಂತಹ ಪರಿಸ್ಥಿತಿ ಎದುರಾಗಿದೆ. ಸ್ವಲ್ಪ ಸಮಯ ಕೊಡಿ, ಸಾಲ ಮರುಪಾವತಿಸುತ್ತೇವೆಂದು ಹೇಳಿದರೂ ಕೇಳುತ್ತಿಲ್ಲ. ʼಯಾರ ಬಳಿಯಾದರೂ ಸಾಲ ಪಡೆದು ನಮ್ಮ ಸಾಲ ಕಟ್ಟಿ, ನೀವು ವಿಷ ತೆಗೆದುಕೊಳ್ಳುತ್ತೀರೋ, ಬಿಡ್ತಿರೊ ಅದು ನಮಗೆ ಬೇಕಿಲ್ಲ. ನೀವು ದುಡ್ಡು ಕಟ್ಟಕಬೇಕು ಅಷ್ಟೇʼ ಅಂತ ಧರ್ಮಸ್ಥಳ ಸಂಘದ ಅಧಿಕಾರಿ ಜಗದೀಶ್ ಎನ್ನವವರು ಕೆಟ್ಟಕೆಟ್ಟ ಶಬ್ದಗಳಿಂದ ಬೈದು ಬೆದರಿಸಿದ್ದಾರೆ. ಅವರ ಬೈಗುಳ ಕೇಳಿ ಬದುಕಬಾರದೆಂದು ಇಂಥ ನಿರ್ಧಾರ ತೆಗೆದುಕೊಂಡಿದ್ದೇನೆ. ಅವರ ಕಾಟ ತಡಯಲಾಗದ ನನಗೆ ಸಾವೇ ಗತಿ” ಎಂದು ಸಂಕಟ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವ ಕ್ಯಾನ್ಸರ್‌ ದಿನ: ಒಂದು ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾದ ಕ್ಯಾನ್ಸರ್ ಪೀಡಿತ ಮಕ್ಕಳು

ಸಂತ್ರಸ್ತೆಯ ಸಹೋದರ ಮಾತನಾಡಿ, “ಧರ್ಮಸ್ಥಳ ಸಂಘದ ಅಧಿಕಾರಿಗಳು ಪದೇಪದೆ ಮನೆ ಹತ್ತಿರ ಬಂದು ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಾಲ ಕಟ್ಟಬೇಕು ಅಂತ ರಾತ್ರಿ ಹತ್ತು ಗಂಟೆವರೆಗೂ ಮನೆ ಮುಂದೆ ಕುಂತು ಸಾಲ ವಸೂಲಿ ಮಾಡುತ್ತಾರೆ. ಈ ಸಂಘದ ಸಾಲ ಕಟ್ಟಲು ನಮ್ಮಕ್ಕ ಮತ್ತೊಂದು ಸಂಘದಲ್ಲಿ ಸಾಲ ತೆಗೆದುಕೊಳ್ಳಬೇಕು. ಈ ಸದ್ಯ ಸ್ವಲ್ಪ ಸಮಯ ಕೊಡಿ, ಹೀಗೆ ಕುಳಿತರೆ ಸಾಯುವುದೊಂದೇ ದಾರಿ ನಮಗೆ ಉಳಿದಿರುವುದು, ಎಂದರೆ, ʼಸಾಯಿರಿ, ಸತ್ತರೆ ಸಂಘದ ಸಾಲ ಮನ್ನಾ ಆಗುತ್ತೆʼ ಎಂದಿದ್ದಾರೆ. ಹಾಗಾಗಿ ನಮ್ಮಕ್ಕ ವಿಷ ಸೇವಿಸಿ ಸಾಯಲು ಮುಂದಾಗಿದ್ದಾಳೆ” ಎಂದು ಅವಲತ್ತುಕೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 8
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...