ವಿಜಯಪುರ | ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಆಗ್ರಹ

Date:

ಚಿಮ್ಮಲಗಿ ಏತ ನೀರಾವರಿ ಯೋಜನೆಗಾಗಿ ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಾಲಯದ ಆದೇಶದಂತೆ ಶೀಘ್ರವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ.

ಸಂಘಟನೆಯ ಕಾರ್ಯಕರ್ತರು ಕೃಷ್ಣಾ ಮೇಲ್ದಂಡೆ ಯೋಜನೆಯ ಮಹಾ ವ್ಯವಸ್ಥಾಪಕ ರಮೇಶ ಕಳಸದ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, “ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತೀರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯಿಂದ ನಷ್ಟಗೊಂಡ ರೈತರಿಗೆ ಭೂಸ್ವಾಧೀನದ ಹಣ ಹಾಗೂ ಹೆಚ್ಚುವರಿ ಕೋರ್ಟ್ ಮೂಲಕ ಆದೇಶವಾದ ಪರಿಹಾರದ ಹಣವನ್ನು ಈವರೆಗೆ ಬಿಡಗಡೆ ಮಾಡಿಲ್ಲ. ಇದು ನ್ಯಾಯಾಂಗ ನಿಂದನೆಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 12 ವರ್ಷಗಳಿಂದ ಚಿಮ್ಮಲಗಿ ಏತ ನೀರಾವರಿ ಯೋಜನೆ ನಡೆಯುತ್ತಿದ್ದು, ರೈತರ ಜಮೀನುಗಳಲ್ಲಿ ಕಾಮಗಾರಿ ಕೈಗೊಳ್ಳುವ ಮುಂಚೆಯೇ ಭೂಸ್ವಾಧೀನದ ನೋಟಿಸ್ ಹಾಗೂ ಪರಿಹಾರ ನೀಡಿದ ನಂತರ
ಕಾಮಗಾರಿ ಪ್ರಾರಂಭಿಸಬೇಕು ಎಂಬ ನಿಯಮವಿದೆ. ಅದರೆ, ಆ ನಿಯಮಗಳನ್ನು ಗಾಳಿಗೆ ತೂರಿ ರೈತರನ್ನು ಇಲಾಖೆಗೆ ಹಾಗೂ ಕೋರ್ಟಿಗೆ ಅಲೆದಾಡುವಂತೆ ಮಾಡಲಾಗಿದೆ” ಎಂದು ದೂರಿದ್ದಾರೆ.

“ಕಾಲಮಿತಿ ಮುಗಿದರೂ ಇಲ್ಲಿಯವರೆಗೆ ಕಾಮಗಾರಿ ಮುಗಿಸಿಲ್ಲ. ರೈತರು ಕೇಳಿದರೆ ಹಾರಿಕೆ ಉತ್ತರ ನೀಡಲಾಗುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಲ್ಲ” ಎಂದು ಆರೋಪಿಸಿದರು.

“ಕೂಡಲೇ ಎಲ್ಲ ರೈತರಿಗೂ 15 ದಿನಗಳ ಒಳಗೆ ಪರಿಹಾರ ನೀಡಿದ್ದರೆ ಇಲಾಖೆಗೆ ಬೀಗ ಜಡಿದು ಪರಿಹಾರ ನೀಡುವವರೆಗೂ ಸತ್ಯಾಗ್ರಹ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಹಕ್ಕೊತ್ತಾಯ ಪತ್ರ ಸ್ವೀಕರಿಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಮಹಾ ವ್ಯವಸ್ಥಾಪಕ ರಮೇಶ ಕಳಸ, “ಸರ್ಕಾರಕ್ಕೆ ಈಗಾಗಲೇ ಪರಿಹಾರ ನೀಡಲು ಅನುದಾನ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಅನುದಾನ ಬಂದ ತಕ್ಷಣ ಎಲ್ಲ ಫಲಾನುಭವಿಗಳಿಗೆ ನೀಡಲಾಗುವುದು” ಎಂದರು.

ಹಕ್ಕೊತ್ತಾಯ ಸಲ್ಲಿಸುವ ವೇಳೆ ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲ ವಾಲಿಕಾರ, ಕಲಕೇರಿ ಹೋಬಳಿ ಅಧ್ಯಕ್ಷ ಮಹಿಬೂಬ ಬಾಷಾ ಮನಗೂಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...