ವಿಜಯಪುರ | ವಿವಿಧ ಇಲಾಖೆಗಳಲ್ಲಿ 2.86 ಲಕ್ಷ ಖಾಲಿ ಹುದ್ದೆಗಳು; ಶೀಘ್ರ ನೇಮಕಾತಿಗೆ ಆಕಾಂಕ್ಷಿಗಳ ಆಗ್ರಹ

Date:

“ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.86 ಲಕ್ಷ ವಿವಿಧ ಹುದ್ದೆಗಳು ಖಾಲಿ ಇದ್ದು ತಕ್ಷಣ ಭರ್ತಿ ಮಾಡಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿ ಯುವ ಜನರು ವಿಜಯಪುರ ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಿಂದ, ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಜಾತ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಿತ್ರ ಇರುವ ಫಲಕಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಪಾರದರ್ಶಕವಾಗಿ ನೇಮಕಾತಿ ಮಾಡಬೇಕು, ಬ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳಬಹುದು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ್ ನಗರದ ಡಾ. ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರವೇಶ ಶುಲ್ಕ ₹500 ನಿಗದಿ ಪಡಿಸಿರುವುದನ್ನು ತೆಗೆದು ಹಾಕಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಬೇಕು” ಎಂದು ಆಗ್ರಹಿಸಿದರು.

“ಅನೇಕ ವರ್ಷಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ವಯೋಮಿತಿಯನ್ನು ಹೆಚ್ಚಿಸುವುದೇ ಇದಕ್ಕೆ ಪರಿಹಾರ. ಇಲ್ಲವಾದರೆ ಸರ್ಕಾರ ಮಾಡಿದ ತಪ್ಪಿಗೆ ಲಕ್ಷಾಂತರ ಬಡವರು ಉದ್ಯೋಗ ವಂಚಿತರಾಗ ಬೇಕಾಗುತ್ತದೆ. ಹೀಗಾಗಿ ಸರ್ಕಾರ ಕೂಡಲೇ ವಯೋಮಿತಿ ಹೆಚ್ಚಿಸಿ ನೇಮಕಾತಿಯನ್ನು ಆರಂಭಿಸಬೇಕು” ಎಂದು ಆಗ್ರಹಿಸಿದರು.

“ನೇಮಕಾತಿ ಇಂದು ನಡೆಯುತ್ತದೆ, ನಾಳೆ ನಡೆಯುತ್ತದೆ ಎಂದು ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ, ಆಳುವ ಸರ್ಕಾರಗಳು ಮಾತ್ರ ಇದಕ್ಕೆ ಕ್ಯಾರೆ ಎನ್ನುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಪೊಲೀಸಳಕ್ಕೆ ಪಶು ಸಂಗೋಪನ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಉದ್ಯೋಗಗಳಿಗೆ ನೇಮಕಾತಿ ಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂತ ಕುಮಾರ್ ಆರ್, ಶ್ರೀಶೈಲ ತೇಲಿ, ಅನಿಲ್ ಕಾಂಬಳೆ, ವಿಜಯಕುಮಾರ ಮಮದಾಪುರ ಸಿದ್ದು ಕೇರಿ ಶರಣಯ್ಯ ಭಂಡಾರಿ ಮಠ ಪ್ರಭುಗೌಡ ರೆಡ್ಡಿ ಮಾಂತು ಮಾವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...