ವಿಜಯಪುರ | ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸ್‌ ಅವರ 42ನೇ ಪುಣ್ಯತಿಥಿ ಆಚರಣೆ

Date:

ದೇವರಾಜ್ ಅರಸರ ಅವಧಿಯಲ್ಲಿ ಅಧಿಕಾರ ವಂಚಿತ ಸಮುದಾಯಗಳನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವಾಯಿತು ಮತ್ತು ಅರಸು ಕಾರ್ಯಕ್ರಮಗಳ ಅನುಕೂಲ ಪಡೆದ ಯುವಕರು ಶಿಕ್ಷಣ ಅಧಿಕಾರ ಪಡೆದು ಮುಖ್ಯ ವಾಹಿನಿಯಲ್ಲಿ ಬೆಳೆಯುವಂತಾಯಿತು ಎಂದು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಕಳ್ಳಿಮನಿ ಹೇಳಿದರು.‌

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್‌ ಅವರ 42ನೇ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಮಾತನಾಡಿ, “ದೇವರಾಜ್‌ ಅರಸ್‌ ಅವರು ಹಾವನೂರ ಆಯೋಗದ ವರದಿಯನ್ನು ಜಾರಿಗೊಳಿಸಿ ಕರ್ನಾಟಕದಲ್ಲಿ ಕ್ರಾಂತಿ ಮಾಡಿದರು ಮತ್ತು ಹಿಂದುಳಿದ ಅಲ್ಪಸಂಖ್ಯಾತರ, ದಲಿತರ ಬದುಕಿಗೆ ಬೆಳಕಾದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‌ಧಾರವಾಡ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಹರೀಶ್ ಕೆಂಚಣ್ಣವರ

ಹಿರಿಯ ಮುಖಂಡ ಡಿ ಎಲ್ ಚವ್ಹಾಣ್ ಮಾತನಾಡಿ, “ಉಳುವವನೇ ಭೂಮಿಯ ಒಡೆಯ ಎಂಬ ಕಾಯಿದೆಯನ್ನು ಸಂಪೂರ್ಣವಾಗಿ ಜಾರಿಗೆ ತಂದು ಬಡ ರೈತರಿಗೆ ನೆರವಾದರು. ಅರಸು ಒಬ್ಬ ಸರಳ, ವಿನಯ, ಬದ್ಧತೆಯ ಮುತ್ಸದ್ಧಿ ರಾಜಕಾರಣಿಯಾಗಿದ್ದರು” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಭಾಷ ಕಾಲೇಬಾಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ಚನ್ನಬಸಪ್ಪ ನಂದರಗಿ, ಫಿರೋಜ ಶೇಖ, ಬಾಬಾಜಾನ ಬಾಗವಾನ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...