ಜಾತಿ ನಿಂದನೆ ಮಾಡಿದ ಚಲನಚಿತ್ರ ನಟ ಉಪೇಂದ್ರನನ್ನು ಬಂಧಿಸುವಂತೆ ಭೀಮ್ ಆರ್ಮಿ ಸಂಘಟನೆ ಕಾರ್ಯಕರ್ತರು ವಿಜಯಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಮಲ್ಲು ಜಾಲಗೇರಿ ಮಾತನಾಡಿ, “ಕನ್ನಡ ಚಲನಚಿತ್ರ ನಟ ಉಪೇಂದ್ರ ದಲಿತ ಸಮುದಾಯದ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ್ದು, ದಲಿತರ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರು ಮಾತನಾಡುವಾಗ “ಊರು ಇದ್ದಲ್ಲಿ ಹೊಲಗೇರಿ ಇರುತ್ತದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ ಕೂಡಲೇ ನಟ ಉಪೇಂದ್ರನನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ನಡೆಸುವಂತೆ ಆಗ್ರಹ
ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಮತೀನ್ ಕುಮಾರ, ಸಲೀಂ, ಅಪ್ಪು ಮುಲ್ಲಾ, ಅಬ್ದುಲ್ ಖಯುಮ್ ಚೌದರಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.




