ವಿಜಯಪುರ | ಜೀವನ್ಮರಣದ ನಡುವೆ ಹೋರಾಡುತ್ತಿದ್ದ ನವಜಾತ ಶಿಶುವಿಗೆ ಮರುಜನ್ಮ ನೀಡಿದ ವೈದ್ಯರು

Date:

ಮಗು ಜೀವಂತವಾಗಿ ಉಳಿಯುತ್ತದೆ ಎಂಬ ಭರವಸೆಯೂ ಇರದ ನವಜಾತ ಶಿಶುವಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರಂತರ 53 ದಿನಗಳ ಚಿಕಿತ್ಸೆ ನೀಡಿ, ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಗುವಿಗೆ ಪುನರ್ಜನ್ಮ ನೀಡಿದ್ದಾರೆ.

ಜನಿಸಿದಾಗಲೇ 700 ಗ್ರಾಂ ತೂಕ ಹೊಂದಿದ್ದ ನವಜಾತ ಶಿಶು, ಬದುಕಿ ಉಳಿಯುವ ಸಾಧ್ಯತೆ ಇರಲಿಲ್ಲ. ಆದರೂ ಛಲ ಬಿಡದ ಜಿಲ್ಲಾ ಆಸ್ಪತ್ರೆಯ ವೈದ್ಯರು ಪವಾಡವೆಂಬಂತೆ ಅತಿ ಕಡಿಮೆ ತೂಕದೊಂದಿಗೆ ಜನನವಾಗಿದ್ದ ಮಗುವಿಗೆ ಸೂಕ್ತ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ.

ವಿಜಯಪುರ ಜಿಲ್ಲೆಯ  ತಾಲೂಕಿನ ಆಲಗೂರ ಗ್ರಾಮದ ನಿವಾಸಿ ಆಯಿಶಾ ಎಂಬುವವರು 7ನೇ ತಿಂಗಳು ಗರ್ಭಿಣಿ ಇದ್ದಾಗಲೇ ಹೆರಿಗೆಯಾಗಿ ಅವಳಿ-ಜವಳಿ ಹೆಣ್ಣು ಮಕ್ಕಳು ಜನಿಸಿದ್ದವು. ಅದರಲ್ಲಿ ಒಂದು ಮಗು ಒಂದೂವರೆ ಕಿಲೋ ಇದ್ದರೆ, ಇನ್ನೊಂದು ಮಗು ಮಾತ್ರ ಕೇವಲ 750 ಗ್ರಾಂ ತೂಕ ಹೊಂದಿತ್ತು. ಜೊತೆಗೆ ಉಸಿರಾಟದ ಸಮಸ್ಯೆ ಹಾಗೂ ಇನ್‌ಫೆಕ್ಷನ್​ನಿಂದ ಕೂಡಿತ್ತು. ಬಳಿಕ ಮತ್ತೆ ತೂಕ ಕಳೆದುಕೊಂಡ ಮಗು 700 ಗ್ರಾಂ ತೂಕಕ್ಕೆ ಬಂದಿದ್ದರಿಂದ ಮಗು ಉಳಿಯುವುದಿಲ್ಲವೆಂದು ವೈದ್ಯರು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಗಾದರೂ ಮಾಡಿ ನಮ್ಮ ಮಗುವನ್ನು ಉಳಿಸಿ ಎಂದು ಆಯಿಶಾ-ಖಾದರಸಾಬ್ ದಂಪತಿಗಳು ವೈದ್ಯರನ್ನು ಕೇಳಿಕೊಂಡಿದ್ದರು. ಒಂದು ಪ್ರಯತ್ನ ಮಾಡಿ ನೊಡೋಣವೆಂದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳು, ಪೂರ್ಣ ಪ್ರಮಾಣದಲ್ಲಿ ಬೆಳವಣಿಗೆ ಆಗದೆ ಹುಟ್ಟಿದ್ದ ಮಗುವಿಗೆ ನವಜಾತ ಶಿಶು ಆರೈಕೆ ಘಟಕದಲ್ಲಿರಿಸಿ ಏನೇನು ಚಿಕಿತ್ಸೆ ಮಾಡಬೇಕೋ ಅದನ್ನೆಲ್ಲ ಮಾಡಿ ಬರೋಬ್ಬರಿ 53 ದಿನಗಳ ಕಾಲ ಆರೈಕೆ ಮಾಡಿ ಕೊನೆಗೆ ಮಗುವನ್ನು ಉಳಿಸುವಲ್ಲಿ ಸಫಲರಾಗಿದ್ದಾರೆ.

ನವಜಾತ ಶಿಶು ಉಳಿಯುವ ಲಕ್ಷಣ ಇಲ್ಲದಿದ್ದರೂ ಕೂಡ ಇದನ್ನೇ ಸವಾಲಾಗಿ ಸ್ವೀಕರಿಸಿದ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹಾಗೂ ಅವರ ತಂಡ ಅವಿರತವಾಗಿ ಶ್ರಮಿಸಿ ಮಗುವಿಗೆ ಬೇಕಾದ ಎಲ್ಲ ಚಿಕಿತ್ಸೆಗಳನ್ನು ನೀಡಿದ್ದರಿಂದ ಮಗುವಿನ ತೂಕ ಇದೀಗ 1650 ಕಿಲೋಗ್ರಾಂಗೆ ಹೆಚ್ಚಾಗಿದೆ. ಹಾಗಾಗಿ ಶಿಶುವನ್ನು ನವಜಾತ ಶಿಶು ಆರೈಕೆ ಘಟಕದಿಂದ ಹೊರತಂದು ತಾಯಿಯ ಮಡಿಲಿಗೆ ಹಾಕಿದ್ದಾರೆ.

ಇನ್ನು ಶಿಶುವಿಗೆ ಇದೇ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ನೀಡಿದ್ದರೆ ಕಡಿಮೆ ಎಂದರೂ 3 ಲಕ್ಷ ರೂಪಾಯಿ ಖರ್ಚು ಆಗುತ್ತಿತ್ತು. ಆದರೆ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರದಿಂದ ಉಚಿತವಾಗಿ ಆಗಿದ್ದು, ಒಂದೇ ಒಂದು ರೂಪಾಯಿ ಖರ್ಚಿಲ್ಲದೆ ಮಗುವನ್ನು ಬದುಕಿಸಿಕೊಂಡ ಅದೆಷ್ಟೋ ಬಡವರಿಗೆ ಅತ್ಯಂತ ಸಹಕಾರಿಯಾಗಿದೆ. ತಮ್ಮ ಮಗುವಿಗೆ ಚಿಕಿತ್ಸೆ ನೀಡಿ ಉಳಿಸಿದ್ದಕ್ಕೆ ಮಗುವಿನ ಪೋಷಕರು ಜಿಲ್ಲಾಸ್ಪತ್ರೆಯ ವೈದ್ಯರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಲಿಂಡರ್​ ಸ್ಫೋಟ; ತಾಯಿ ಮಕ್ಕಳಿಗೆ ಗಂಭೀರ ಗಾಯ

ಕಳೆದ 2018 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಸ್​ಎನ್​ಸಿಯೂ ಸ್ಥಾಪನೆಯಾಗಿದ್ದು, ನವಜಾತ ಶಿಶುಗಳ ಚಿಕಿತ್ಸೆ ನೀಡಿ ಶಿಶುಗಳನ್ನು ಬದುಕಿಸುವಲ್ಲಿ ಇಲ್ಲಿನ ವೈದ್ಯರ ತಂಡ ಸಫಲವಾಗಿದೆ. ಸದ್ಯ 750 ಗ್ರಾಂ ತೂಕವಿದ್ದ ಮಗವಿಗೆ 53 ದಿನಗಳ ಕಾಲ ನಿರಂತರ ಚಿಕಿತ್ಸೆ ನೀಡಿ ಆ ಮಗುವನ್ನು ಬದುಕಿಸಿದ್ದು ಸಹ ಸಾಧನೆಯೇ ಆಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯೂ ಉಚಿತವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಸ್ಪತ್ರೆಯ ವೈದ್ಯರು ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...