ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ

Date:

ಮಹಾಪುರುಷರ ಜಯಂತಿ ಆಚರಿಸುವುದರ ಜತೆಗೆ ಅವರು ಹೇಳಿದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಈ ಉತ್ಸವ ಸಾರ್ಥಕವಾಗುತ್ತದೆ ಎಂದು ಇಂಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ‌ ಭವನದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ರಾಮಾಯಣ ರಚನೆಕಾರ ವಾಲ್ಮೀಕಿ ಜಯಂತಿ ಆಚರಣೆಯನ್ನು ತುಂಬಾ ವಿಜೃಂಭಣೆಯಿಂದ ಆಚರಿಸುವುದರ ಜತೆಗೆ ವರ್ಷದಲ್ಲಿ 32 ಮಹಾಪುರುಷರ ಜಯಂತಿಗಳನ್ನು ನಮ್ಮ ಇಲಾಖೆ ಆಚರಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಸಕ ಸದಾನಂದ ಹಿರೇನಕೆರಿ ಮಾತನಾಡಿ, “ರಾಮಾಯಣದ ಕರ್ತೃ, ಆದಿಕವಿ, ಋಷಿಕವಿಯೂ ಆದ ವಾಲ್ಮೀಕಿ ಮಹರ್ಷಿಗಳು ಮಹಾಕಾವ್ಯ ಬರೆಯುವುದರ ಮೂಲಕ ಈ ನಾಡಿಗೆ ಅನನ್ಯ ಕೊಡುಗೆ ನೀಡಿದ್ದಾರೆ. ಇವರ ಜಯಂತಿ ಆಚರಿಸುವುದರ ಜತೆಗೆ ರಾಮಾಯಣದಲ್ಲಿರುವ ಮೌಲ್ಯಗಳನ್ನು ಇಂದಿನ ಜನಾಂಗ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಾಯಣ ಕಾವ್ಯ ಓದುವುದರಿಂದ ಜೀವನ ಬದಲಾವಣೆಯಾಗುತ್ತದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇ ಶಕ ಉಮೇಶ್ ಲಮಾಣಿ, ಪುರಸಭೆ ಮುಖ್ಯಾಧಿಕಾರಿ ಮಾಂತೇಶ್ ಹಂಗರಗಿ, ವಾಲ್ಮೀಕಿ ಮಹಾಸಭಾದ ರಾಜ್ಯ ನಿರ್ದೇಶಕ ಸಂಜು ನಾಯ್ಕೋಡಿ, ಎಇಇ ಆ‌ರ್ ಎಸ್ ಮಡೆಗಾರ, ನಾಗಪ್ಪ ನಾಯಕೋಡಿ ಅರ್ಜುನ ನಾಯ್ಯೋಡಿ, ಉಪಾಧ್ಯಕ್ಷರಾದ ಮಾರುತಿ ಕೊಡತೆ, ಧನರಾಜ್ ಮುಜುಗೊಂಡ, ಪಿಎಸ್‌ಐ ಸಂಗಮೇಶ್ ನಾಯಕೋಡಿ, ಬಂಜಾರ ಸಮಾಜದ ಅಧ್ಯಕ್ಷ ಸಂಜು ಚವ್ಹಾಣ, ಡಿಎಸ್‌ಎಸ್ ಮುಖಂಡ ಬಾಬು ಗುಡುಮಿ, ಭೀಮರಾಯ ನಾಕ್ಕೋಡಿ, ಮಾದೇವ ವಾಲಿಕಾರ್, ಅಹಿರಸಂಗ ಗ್ರಾ ಪಂ ಅಧ್ಯಕ್ಷ ಹಸನ ಶೇಖ, ಭೀಮರಾಯ ಕಾ ನಾಲ್ನೋಡಿ, ಹನುಮಂತ ಹಿಪ್ಪರಗಿ, ಎಲ್ಲಪ್ಪ ಪೂಜಾರಿ, ಸತೀಶ್ ಹಿಪ್ಪರಗಿ, ಗಂಗೂ ಬೇಡರ, ಸಿದ್ದು ಬೇಡರ, ಸೈಬಣ್ಣ ನಾಲ್ನೋಡಿ, ರಾಜು ಬೇಡರ, ರಾಜು ನಾಯೊಡಿ, ಸಿದ್ದು ಲಚ್ಚಣ, ಶಿವಪ್ಪನ ನಾಯ ಕೋಡಿ, ಶಿವಪ್ಪ ನಾಯಕೋಡಿ, ಬಸವರಾಜ್ ಗೊಲಗೇರಿ, ಪ್ರಕಾಶ್ ಸಣ್ಣಮನಿ, ಲಕ್ಷ್ಮೀಬಾಯಿ ನಾಲ್ನೋಡಿ ಸೇರಿದಂರೆ ಮೊದಲಾದವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...