ವಿಜಯಪುರ | ದೇಶಕ್ಕೆ ಅಂಬೇಡ್ಕರ್, ರಾಜ್ಯಕ್ಕೆ ಪ್ರೊ. ಕೃಷ್ಣಪ್ಪ ಅವರ ಕೊಡುಗೆ ಅಪಾರ: ಸತೀಶ ಜಾರಕಿಹೊಳಿ

Date:

ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ) ವಿಜಯಪುರ ಜಿಲ್ಲಾ ಸಮಿತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಸಮಾನತೆಗಾಗಿ ಸಂವಿಧಾನ ಮತ್ತು ಅಂಬೇಡ್ಕರ ಎಂಬ ಜನಾಂದೋಲನ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಾಮಾಜಿಕ ನ್ಯಾಯ ಸಿಗಬೇಕು ಅಂದರೆ ಸಂಘಟಿತರಾರಗಿ ಹೋರಾಟ ಮಾಡಬೇಕು. ಅಂತ ಹೋರಾಟ ಪ್ರೊ. ಬಿ ಕೃಷ್ಣಪ್ಪ ನವರು ರಾಜ್ಯದ ಮೂಲೆ ಮೂಲೆಗೆ ಹೋಗಿ ಕಟ್ಟಿದ್ದಾರೆ. ಅಂಬೇಡ್ಕರ್ ಅವರ ವಿಚಾರ ಮೈಗೂಡಿಸಿಕೊಂಡು ಹಗಲಿರುಳು ಎನ್ನದೆ ಹೋರಾಟ ಮಾಡಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳು ಹಾಗೂ ಸಂವಿಧಾನ ತಿರಸ್ಕಾರ ಮಾಡುವವರ ವಿರುದ್ಧ ನಾವು ಸದಾ ಎಚ್ಚರಿಕೆ ವಹಿಸಬೇಕು. ನಮ್ಮ ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಸಮಾನತೆ ದೊರಕಿಲ್ಲ. ಈಗಲೂ ದೇವಸ್ಥಾನಗಳಿಗೆ ದಲಿತರಿಗೆ, ಅಸ್ಪೃಶ್ಯರಿಗೆ ಪ್ರವೇಶವಿಲ್ಲ. ಒಂದು ವೇಳೆ ಪ್ರವೇಶ ಮಾಡಿದರೆ ದಂಡ ವಿಧಿಸಿವುದು ಜಾರಿಯಲ್ಲಿದೆ. ಇದು ಬದಲಾಗಬೇಕು. ಸಮಾನತೆಗಾಗಿ ಹೋರಾಟ ಮಾಡುವ ಅಗತ್ಯವಿದೆ. ಸಂವಿಧಾನ ರಕ್ಷೆಣೆ ಮಾಡುವುದು ನಮ್ಮಲ್ಲರ ಜವಾಬ್ದಾರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಗಣಿಹಾರ ತಾಂಡಾದ ದೇವಿಬಾಯಿ ಕೊಲೆ ಪ್ರಕರಣ:‌ ಆರೋಪಿಗಳ ಜಾಮೀನು ವಿರೋಧಿಸಿ ಸ್ಥಳೀಯರ ಮನವಿ

ಕಾರ್ಯಕ್ರಮದಲ್ಲಿ ಅಶೋಕ ಛಲವಾದಿ, ಶರಣು ಶಿಂಧೆ, ಪ್ರಕಾಶ ಗುಡಿಮನಿ, ಪರಸು ದಿಂಡಿವಾರ, ಲಕ್ಕಪ್ಪ ಬಡಿಗೇರ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬ್ಲೆಶ್ವೇರ, ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣುರೂ, ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಗೂ ಸಂಘಟನೆಯ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...