ವಿಜಯಪುರ | ಶೋಷಿತರ ಗೌರವಯುತ ಬದುಕಿಗೆ ಅಂಬೇಡ್ಕರ್‌ ಕಾರಣ: ಚಿಂತಕ ರಂಜಾನ್ ದರ್ಗಾ

Date:

ಭಾರತದ ಬಹುಸಂಖ್ಯಾತ ದಲಿತರು, ಶೋಷಿತರು, ವಿಶೇಷವಾಗಿ ಮಹಿಳೆಯರು ಇಂದು ಗೌರವಯುತವಾಗಿ ಬದುಕುತ್ತಿದ್ದಾರೆಂದರೆ ಅದಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಮತ್ತು ಸಂವಿಧಾನ ಕಾರಣ ಎಂದು ಪ್ರಗತಿಪರ ಚಿಂತಕ, ಲೇಖಕ ರಂಜಾನ್ ದರ್ಗಾ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ತೊರವಿ ರಸ್ತೆಯ ಡಾ. ಅಂಬೇಡ್ಕರ್ ಎಜುಕೇಶನಲ್ ಅಸೋಸಿಯೇಶನ್‌ನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಸಚಿವ, ಕ್ರಾಂತಿಕಾರಿ ದಲಿತ ನಾಯಕ ಬಿ. ಬಸವಲಿಂಗಪ್ಪ ಅವರ 101ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಡಾ. ಅಂಬೇಡ್ಕರ್ ಅವರ ಬಾಲ್ಯ ಮತ್ತು ವಿದ್ಯಾರ್ಥಿ ಜೀವನ ಸುಖಮಯವಾಗಿರಲಿಲ್ಲ. ಕಠಿಣ ಪರಿಶ್ರಮದಿಂದ ಜಗತ್ತಿನ ಅತ್ಯಂತ ವಿದ್ಯಾವಂತರಲ್ಲಿ ಒಬ್ಬರಾದರು. ಅವರ ಜನ್ಮದಿನವನ್ನು ವಿಶ್ವ ಜ್ಞಾನದಿನವನ್ನಾಗಿ ಘೋಷಿಸಲಾಗಿದೆ. ಇಡೀ ಸಂವಿಧಾನ ರಚನಾ ಸಭೆಯಲ್ಲಿ ಅವರಷ್ಟು ಪದವಿಗಳು ಯಾರ ಬಳಿಯೂ ಇರಲಿಲ್ಲ. ವಿದ್ಯಾರ್ಥಿಗಳು ಡಾ. ಅಂಬೇಡ್ಕರ್ ಅವರನ್ನು ಆದರ್ಶವನ್ನಾಗಿ ಇಟ್ಟುಕೊಳ್ಳಬೇಕು” ಎಂದರು.

WhatsApp Image 2025 02 04 at 1.10.44 PM 1

“ಸಾಮಾಜಿಕ ಸಮಾನತೆಗಾಗಿ ನಡೆದ ಎಲ್ಲ ಹೋರಾಟಗಳು ಬಸವಲಿಂಗಪ್ಪ ಅವರಿಂದ ಪ್ರಾರಂಭವಾದವು ಎಂದರೆ ತಪ್ಪಾಗದು. ದಲಿತ ಸಂಘರ್ಷ ಸಮಿತಿಯ ಹುಟ್ಟಿಗೆ ಅವರ ಒಂದು ಹೇಳಿಕೆ ಕಾರಣವಾಯಿತು. ಬಂಡಾಯ ಮತ್ತು ದಲಿತ ಸಾಹಿತ್ಯದ ಮೂಲಕ ಪ್ರಖರ ಬರಹಗಾರರು ಹುಟ್ಟಿಕೊಂಡರು ಎಂದು ಹೇಳಿದ ಅವರಿಗೆ ಬಿಜಾಪುರದಲ್ಲೂ ಅನೇಕ ಒಡನಾಡಿಗಳಿದ್ದರು. ಅಂಥವರಲ್ಲಿ ಒಬ್ಬರಾದ ತುಕಾರಾಮ ಚಂಚಲಕರ ಅವರು ಅಂಬೇಡ್ಕರ್ ಮತ್ತು ರಮಾ ತಾಯಿ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವುದು ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಮುಖ್ಯ ಅತಿಥಿ ಧಾರವಾಡದ ಬಸವ ಮಿಷನ್‌ನ ಮಹಾದೇವ ಹೊರಟ್ಟಿ ಮಾತನಾಡಿ, “ಬಿ. ಬಸವಲಿಂಗಪ್ಪ ಅವರು ಒಬ್ಬ ಕ್ರಾಂತಿಕಾರಿ ಹೋರಾಟಗಾರರಾಗಿದ್ದರು. ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳದ ರಾಜಕಾರಣಿಯಾಗಿದ್ದರು. ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದಲ್ಲಿ ಅವರು ಕ್ಷಣವೂ ಇರುತ್ತಿರಲಿಲ್ಲ. ಹೊಂದಾಣಿಕೆ ರಾಜಕಾರಣ ಮಾಡಿದ್ದರೆ ಬಸವಲಿಂಗಪ್ಪ ಅವರು ಮುಖ್ಯಮಂತ್ರಿಯಾಗುತ್ತಿದ್ದರು. ಇಂದಿರಾ ಗಾಂಧಿಯಂಥವರನ್ನೇ ಧಿಕ್ಕರಿಸಿದವರು. ಅವರ ಜೀವನ ಮಾರ್ಗ ಇಂದಿನ ಯುವ ಪೀಳಿಗೆಗೆ ಆದರ್ಶಪ್ರಾಯ” ಎಂದು ಹೇಳಿದರು.

ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ತುಕಾರಾಮ ಚಂಚಲಕರ ಮಾತನಾಡಿ, “ಬಸವಲಿಂಗಪ್ಪ ಅವರ ಜೊತೆಗೂಡಿ ತಾವು ನಡೆಸಿದ ಸಾಮಾಜಿಕ ಹೋರಾಟಗಳ ಮೆಲುಕುಹಾಕಿದರು. ಮುಂದಿನ ದಿನಗಳಲ್ಲಿ ಬಿ. ಬಸವಲಿಂಗಪ್ಪ ಅವರ ಜನ್ಮದಿನವನ್ನು ಸರ್ಕಾರದ ವತಿಯಿಂದ ಆಚರಿಸಬೇಕೆಂದು” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ರೈತರಿಂದ ಕಡಲೆಕಾಳು ಖರೀದಿಗೆ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ತೀರ್ಮಾನ

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿದ್ದಪ್ಪ ಗುದಗೆನ್ನವರ, ಸಂಸ್ಥೆಯ ಅಧ್ಯಕ್ಷ ನಟರಾಜ ಚಂಚಲಕರ, ಉಪಾಧ್ಯಕ್ಷೆ ಸಿಂಧೂ ಚಂಚಲಕರ, ನಿವೃತ್ತ ಪ್ರಾಧ್ಯಾಪಕ ಎಸ್ ಆರ್ ಕಟ್ಟಿ, ಅಲ್-ಅಮೀನ ಮೆಡಿಕಲ್ ಕಾಲೇಜು ಟ್ರಸ್ಟಿ ಡಾ. ರಿಯಾಜ ಫಾರೂಖಿ, ಡಿ. ದೇವರಾಜ ಅರಸು ವಿಚಾರ ಜಾಗೃತಿ ಸಂಘದ ಅಧ್ಯಕ್ಷ ಅರವಿಂದ ಹಿರೊಳ್ಳಿ, ಸಮಾಜವಾದಿ ನಾಯಕ ಅಪ್ಪಾಸಾಹೇಬ ಯರನಾಳ, ಅಂಬೇಡ್ಕರವಾದಿ ಲೇಖಕ ಅನಿಲ ಹೊಸಮನಿ, ಸಿದ್ಧಾರ್ಥ ಹಾಸ್ಟೆಲ್ ಪಿಯು ಮತ್ತು ಪದವಿ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...