ವಿಜಯಪುರ | ಫೇಸ್ ಕ್ಯಾಪ್ಚರ್ ಪದ್ಧತಿ ಕೈಬಿಡಲು ಅಂಗನವಾಡಿ ನೌಕರರ ಒತ್ತಾಯ

Date:

ಅಂಗನವಾಡಿ ನೌಕರು ಪ್ರಸ್ತುತ ನಿರ್ವಹಿಸುತ್ತಿರುವ ಫಲಾನುಭವಿಗಳ ಪೇಸ್ ಕ್ಯಾಪ್ಚರ್ ಪದ್ದತಿಯನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಸಂಸದ ರಮೇಶ್‌ ಜಿಗಜಿಣಗಿ ಅವರಿಗೆ ಎಐಯುಟಿಯುಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕ ಮನವಿ ಸಲ್ಲಿಸಿತು.

“ಅಂಗನವಾಡಿ ಫಲಾನುಭವಿಗಳಿಗೆ ಆಹಾರ ನಿಡಲು ಕಡ್ಡಾಯವಾಗಿ ಪೇಸ್‌ ಕ್ಯಾಪ್ಚರ್ ಮಾಡಬೇಕೆಂದು ಕೇಂದ್ರ ಸರಕಾರ ಜಾರಿಗೂಳಿಸಿದ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ಬಾಣಂತಿ, ಮಕ್ಕಳಿಗೆ ಸೌಲಭ್ಯಗಳನ್ನು ನಿಡಲು ಅವರ ಫೇಸ್ ಕ್ಯಾಪ್ಚರ್ ಮಾಡುವ ಸಂದರ್ಭದಲ್ಲಿ ಎದುರಾಗುವ ಸರ್ವರ್ ಸಮಸ್ಯೆ, ಇಲಾಖೆಯ ಪೋನ್ ನಲ್ಲಿ ಎಂಟ್ರಿ ಆಗದೆ ಇರುವುದು, ಫಲಾನುಭವಿಗಳು ಸರಿಯಾಗಿ ಒಟಿಪಿ ಹೇಳದೆ ಇರುವುದು, ಬಹುತೇಕ ಫಲಾನುಭವಿಗಳು ಬಡವರಾಗಿರುವುದರಿಂದ ತಮ್ಮ ಪೋನ್ ರಿಚಾರ್ಜ್ ಮಾಡಿಸಿರಲ್ಲ, ಆಗ ಅವರ ಪೋನ್ಗೆ ಒಟಿಪಿ ಹೋಗುವುದಿಲ್ಲ, ನಂಬರ್ ಬದಲಾವಣೆ ಇನ್ನೂ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಪೇಸ್ ಕ್ಯಾಪ್ಚರ್ ಮಾಡಬೇಕಾಗಿದೆ. ಇದರಿಂದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಕಲಿಸುವುದು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಯುವವರೆಗೂ ಫೇಸ್‌ ಕ್ಯಾಪ್ಚರ್‌ ಪದ್ಧತಿಯನ್ನು ತಡೆಹಿಡಿಯಬೇಕು ಅಥವಾ ಕೈಬಿಡಬೇಕು” ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಹೆಚ್ ಟಿ, ಉಪಾಧ್ಯಕ್ಷೆ ನಿಂಗಮ್ಮ ಮಠ, ಸಾವಿತ್ರಿ ನಾಗರತ್ತಿ, ಕಾರ್ಯದರ್ಶಿ ಲಕ್ಮೀ ರೇಣುಕಾ ಹಡಪದ, ಸವಿತಾ ತೇರದಾಳ, ಸತ್ಯಮ ಹಡಪದ, ಭಾಗ್ಯ ಇಂಡಿ, ವಿಜಯಲಕ್ಷ್ಮಿ ಹುಣಶ್ಯಾಳ, ಸರಸ್ವತಿ ಮದ್ರಕಿ, ಶಾಂತಾ, ಗಂಗಮ್ಮ ಉಪಲದಿನ್ನಿ ಇದ್ದರು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...