ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

Date:

ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ 1ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ಗೌರವಧನವನ್ನು ನೀಡಬೇಕು ಮತ್ತು ಬಜೆಟ್‌ನಲ್ಲಿ ಘೋಷಿಸಿರುವಂತೆ ₹1,000 ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಅಶಾ ಸಂಘಟನೆ ಜಿಲ್ಲಾ ಸಂಚಾಲಕ ಭರತ್ ಕುಮಾರ್ ಮಾತನಾಡಿ, “ಕಳೆದ ಜನವರಿಯಲ್ಲಿ ನಡೆದ ಹೋರಾಟದ ವೇಳೆ ಏಪ್ರಿಲ್‌ನಿಂದ ಪ್ರತಿ ತಿಂಗಳು ಎಲ್ಲ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ನೀಡಲಾಗುವುದು, ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಗೌರವಧನ ನೀಡಲಾಗುವುದು, ಒಂದು ವೇಳೆ ಕಾಂಪೋನೆಂಟ್‌ಗಳಿಂದ ಯಾರಿಗಾದರೂ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ ಅಂತಹ ಅಶಾ ಕಾರ್ಯಕರ್ತೆಯರಿಗೆ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಲಾಗುವುದೆಂದು ಸ್ವತಃ ಮುಖ್ಯಮಂತ್ರಿಯವರೇ ಹೇಳಿದ್ದರು. ಆದರೆ, ಈಗ ಇದನ್ನು ಜಾರಿಗೊಳಿಸಲು ಸರ್ಕಾರ ಮೀನಾಮೇಷ ಎಣಿಸುವುದು ಸರಿಯಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮಾನಸಿಕ ಒತ್ತಡ ಮೀರಿ ಮಹಿಳೆ ಜವಾಬ್ದಾರಿ ನಿಭಾಯಿಸಬಲ್ಲಳು: ಶೋಭಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಯುಟಿಯುಸಿ ಸಮಿತಿ ಜಿಲ್ಲಾ ಸದಸ್ಯೆ ಮಹಾದೇವಿ ಧರ್ಮಶೆಟ್ಟಿ, ಆಶಾ ಮುಖಂಡೆಯರಾದ ಭಾರತಿ ದೇವಕತೆ, ನಿರ್ಮಲಾ ಕಲಕೇರಿ, ಲೈಲಾ ಪಠಾಣ, ಲಕ್ಷ್ಮೀ ಸಿಮಿಕೇರಿ ರೇಣುಕಾ, ಅಂಬಿಕಾ ಒಳಸಂಗ, ಮೈರುನ್ನಿಸಾ, ಜ್ಯೋತಿ ಶಾಬಾದಿ, ಲಕ್ಷ್ಮೀ, ರೇಣುಕಾ ಸುವಣಾವಿಬೂತಿಮಠ, ಛಲವಾದಿ, ಜಯಶ್ರೀ ತ ಕಂಬಾರ, ಗೀತಾ, ಬಂಗಾರತಾಳ, ಕಾಶೀಬಾಯಿ, ಮಾಳಗುಂಡಮ್ಮ, ರೇಣುಕಾ, ಸುವರ್ಣಾ, ಮಂಜುಳಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...