ವಿಜಯಪುರ | ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ಆಶಾ ಕಾರ್ಯಕತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜಿತಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.

ವಿಜಯಪುರ ಜಿಲ್ಲಾ ಪಂಚಾಯತ್ ವೃತ್ತದಿಂದ ಜಿಲ್ಲಾ ಪಂಚಾಯತ್‌ವರೆಗೆ ಮೆರವಣಿಗೆ ತೆರಳಿ ಮುಖ್ಯ ಕಾರ್ಯನಿವಾಹಕಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.

ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹೆಚ್ ಟಿ ಮಾತನಾಡಿ, “ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟನಲ್ಲಿ ಆನ್‌ಲೈನ್‌ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆಶಾ 1

“ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯವಾಗುತ್ತಿದೆ. ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ. ಇಲಾಖೆಯಿಂದ ಮತ್ತು ಸರ್ಕಾರದಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆಗಳು ಪರಿಹಾರವಾಗದೆ ಹಾಗೆಯೇ ಉಳಿದಿವೆ. ಆದರಿಂದಾಗಿ ಎಲ್ಲ ʼಆಶಾʼ ಕಾರ್ಯಕರ್ತೆಯರು ಸಾವಿರಾರು ರೂಪಾಯಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ” ಎಂದರು.

ಅಶಾ ಕಾರ್ಯಕರ್ತೆಯರು 1

ಮನವಿ ಪತ್ರ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ಮಾತನಾಡಿ, “ಒಂದುವಾರದೊಳಗೆ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳೊಂದಿಗೆ ಮತ್ತು ಆಶಾ ಯೂನಿಯನ್ ಮುಖಂಡರೊಂದಿಗೆ ಸಭೆ ಕರೆದು ಸ್ಥಳೀಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗ್ರಾ.ಪಂ. ಸದಸ್ಯರಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು: ಎಂಎಲ್‌ಸಿ ಸುನಿಲ್ ಗೌಡ ಪಾಟೀಲ್‌

ಆಶಾ ಸಂಘದ ಜಿಲ್ಲಾ ಮುಖಾಂಡಾರದ ಭಾರತಿ ದೇವಕತೆ, ನಿರ್ಮಲಾ ಕಲಕೇರಿ, ರೇಣುಕಾ ಸವಿತಾ ವಾಲಿಕಾರ, ಸಿಂದಗಿ ತಾಲೂಕು ಅಧ್ಯಕ್ಷೆ ಜ್ಯೋತಿ ಶಾಬಾದಿ, ಕಾರ್ಯದರ್ಶಿಗಳಾದ ಮೈರುನ್ನಿಸಾ ಬಾಗೇವಾಡಿ, ಜಯಶ್ರೀ ಬಿರಾದಾರ, ರೇಣುಕಾ ಕಂಬಾರ, ಶೈಲಾ ಪಠಾಣ, ಸಾವಿತ್ರಿ, ಭಾರತಿ ಸಿಂಗೆ, ರೇಣುಕಾ ಚಲವಾದಿ, ಸಿದ್ದಮ್ಮ, ಸುಮಂಗಲಾ ಪಡಸಲಗಿ, ವಿಜಯಲಕ್ಷ್ಮೀ, ದೀಪಾ ಕಂಬಾಗಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...