ವಿಜಯಪುರ | ಬಗರ್‌ಹುಕುಂ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ

Date:

ಬಗರ್‌ಹುಕುಂ ಭೂಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಬಗರಹುಕುಂ ಸಾಗುವಳಿದಾರರ ಭೂ ಕಾರ್ಯಕಾರಿ ಮಂಡಳಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದಿಂದ ವಿಜಯಪುರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಹಾಗೂ ಬಗರ ಹುಕುಂ ಭೂಸಾಗುವಳಿದಾರ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಹೇಮಲು ಜಾದವ್ ಮಾತನಾಡಿ, “1998-99ರಲ್ಲಿ ಬಗರ್‌ಹುಕುಂ ಭೂಹಂಚಿಕೆ ಅಡಿಯಲ್ಲಿ ಸಂಬಂಧಪಟ್ಟ ಸರ್ವೇ ನಂಬ‌ರ್‌ರಗಳಲ್ಲಿ ಅರ್ಜಿ ನಮೂನೆ ಫಾರ್ಮ್ ನಂ:52/53/57ರ ಮುಖಾಂತರ ಜಾಲಗೇರಿ ಗ್ರಾಮದ ಭೂರಹಿತರು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು” ಎಂದು ಹೇಳಿದರು.

“ಬಗರ್‌ಹುಕುಂ ಹಕ್ಕುಪತ್ರ ನೀಡುವಂತೆ 1998ರಲ್ಲಿಯೇ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿಂದ ಈವರೆಗೆ ರೈತರು ಸಾಗುವಳಿ ಮಾಡುತ್ತ ಬಂದಿದ್ದಾರೆ. ಸಾಗುವಳಿ ಮಾಡುತ್ತಿರುವ ರೈತರಿಗೆ ಜಮೀನುಗಳ ಹಕ್ಕುಪತ್ರ ನೀಡಿಲ್ಲ. ಸಂಬಂಧಪಟ್ಟ ತಹಶೀಲ್ದಾರರಿಗೆ 2024ರ ನವೆಂಬರ್‌ 20ರ ಹಾಗೂ ಡಿಸೆಂಬರ್‌ 30ರಂದು ಮನವಿ ಸಲ್ಲಿಸಲಾಗಿದೆ. ಆದ್ದರಿಂದ ಹಕ್ಕುಪತ್ರ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗೋಣಿಕೊಪ್ಪ | ಹ್ಯೂಮಾನಿಟಿ ರಿಲೀಪ್ ಸೊಸೈಟಿ ಲೋಗೋ ಉದ್ಘಾಟನೆ

ಈ ಸಂದರ್ಭದಲ್ಲಿ ಸಾಬು ವಿಜಯಪುರ, ಗೋವಿಂದ ಲಮಾಣಿ, ಹೇಮು ಜಾದವ್, ವೇಣು ಲಮಾಣಿ‌, ಬಿಕ್ಕು ರಾಠೋಡ್, ಜಗಪ್ ರಾಥೋಡ್, ಲಾವು ರಾಠೋಡ, ಬಾಬು ಲಮಾಣಿ, ಸುರೇಶ್ ಚೌಹಾಣ, ಅಪ್ಪು ಜಾದವ್, ಹುನ್ನೂ ರಾಠೋಡ, ಗೋವಿಂದ ರಾಥೋಡ್, ಅಮಿನಾ ಪಿತೋಳಿ, ದುಖದೇವ ಜಾದವ್‌, ಸಂತೋಷ ರಾಠೋಡ್‌, ಸಯ್ಯಾಬಾಯಿ ಜಾದವ್, ತುಳಸಬಾಯಿ ಜಾದವ್‌, ರಾಗು ಪವಾರ್ ಕೃಷ್ಣ ಕೋರೆ, ಶ್ರೀಶೈಲ ಬಸನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...