ವಿಜಯಪುರ | ಕನ್ನೇರಿ ಸ್ವಾಮಿಯ ರಾಜ್ಯ ಪ್ರವೇಶ ನಿರ್ಬಂಧಕ್ಕೆ ಬಸವ ಸೇನೆ ಆಗ್ರಹ

Date:

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಉಗ್ರವಾದಿ ತಾಲಿಬಾನ್ ಸಂಘಟನೆಗೆ ಹೋಲಿಸಿರುವುದು ಅಕ್ಷಮ್ಯ ಅಪರಾಧ ಕನ್ನೇರಿ ಸ್ವಾಮೀಜಿಯ ಈ ಹೇಳಿಕೆಯು ಅತ್ಯಂತ ಖಂಡನೀಯ. ಹಾಗಾಗಿ ಅವರು ರಾಜ್ಯ ಪ್ರವೇಶಿಸುವುದನ್ನು ನಿರ್ಬಂಧಿಸಬೇಕು ಎಂದು ರಾಷ್ಟ್ರೀಯ ಬಸವ ಸೇನೆಯ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ.

ಈ ಕುರುತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಬಸವ ಸಂಸ್ಕೃತಿ ಅಭಿಯಾನದಲ್ಲಿ ಭಾಗವಹಿಸಿದ್ದ ಮಠಾಧೀಶರ ಕುರಿತು ಕನ್ನೇರಿ ಸ್ವಾಮೀಜಿ ಅಶ್ಲೀಲವಾಗಿ ಅವಾಚ್ಯವಾಗಿ ನಿಂದಿಸಿದ್ದರು. ವಿಜಯಪುರ ಜಿಲ್ಲಾಧಿಕಾರಿಗಳು ಆಗ ಅವರನ್ನು ಎರಡು ತಿಂಗಳ ಕಾಲ ವಿಜಯಪುರ ಪ್ರವೇಶಿಸಿದಂತೆ ನಿಷೇಧ ಹೇರಿದ್ದರು. ಸುಪ್ರೀಂ ಕೋರ್ಟ್ ವಿಜಯಪುರ ಜಿಲ್ಲಾಧಿಕಾರಿಗಳ ಆದೇಶ ಎತ್ತಿ ಹಿಡಿದು ಕನ್ನೇರಿ ಶ್ರೀಗೆ ನೀವು ಒಳ್ಳೆಯ ಪ್ರಜೆಯಲ್ಲ ಎಂದು ಛೀಮಾರಿ ಹಾಕಿತ್ತು. ಆದರೂ ಕಿಂಚಿತ್ತೂ ಬುದ್ದಿ ಕಲಿಯದ ಸ್ವಾಮೀಜಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವು ಕನ್ನೇರಿ ಶ್ರೀ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣಗೆ ಒಳಪಡಿಸಬೇಕು. ಕರ್ನಾಟಕ ಪ್ರವೇಶಿಸಿದಂತೆ ಶಾಶ್ವತ ನಿರ್ಬಂಧ ವಿಧಿಸಬೇಕು. ಇಲ್ಲವಾದಲ್ಲಿ ಬಸವಪರ ಸಂಘಟನೆಗಳೆಲ್ಲ ಸೇರಿ ಬೀದಿಗಿಳಿದು ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿಕುಮಾರ ಬಿರಾದಾರ, ಶಾಂತವಿರ ಥಾಲಭಾವಡಿ, ನಿಂಗಪ್ಪ ಸಂಗಾಪುರ, ವಿರಾತಿಶಾನಂದ ಶ್ರೀಗಳು, ಮಾತೋಶ್ರೀ ಚಂದ್ರಕಲಾ ಪಾಟೀಲ, ಗುಣದಾಳ, ಪ್ರದೀಪ್ ತೋರವಿ, ಪ್ರಭುಗೌಡ ಪಾಟೀಲ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...