ವಿಜಯಪುರ | ಸರ್ಕಾರಿ ಯೋಜನೆಗಳ ಬಳಸಿಕೊಂಡು ಉದ್ಯಮಿಗಳಾಗಿ: ಡಾ. ರವೀಂದ್ರ ಬೆಳ್ಳಿಕರೆ

Date:

ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ವಿಜಯಪುರದ ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಕರೆ ನೀಡಿದರು.

ನಗರದ ಹೊರವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು ಸಾಕಾಣಿಕೆ, ಜೇನು ಕೃಷಿ, ಅಣಬೆ ಕೃಷಿ, ಕೃಷಿ ನರ್ಸರಿ ಸ್ಥಾಪನೆ, ಕೃಷಿ ಯಂತ್ರೋಪಕರಣ ಗೃಹಿಣಿರಿಗಾಗಿ ರೊಟ್ಟಿ ತಯಾರಿಕೆ, ಉಪ್ಪಿನಕಾಯಿ ತಯಾರಿಕೆ, ಅಗರಬತ್ತಿ ತಯಾರಿಕೆ ವಿವಿಧ ಹಣ್ಣುಗಳಿಂದ ಜ್ಯೂಸ್ ತಯಾರಿಕೆಯಂತಹ ಹಲವಾರು ಗೃಹ ಉದ್ದಿಮೆ ಸ್ಥಾಪನೆಗೆ ವಿಫುಲ ಅವಕಾಶಗಳಿವೆ. ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿದ್ದಯ್ಯ ಬಿ ಮಾತನಾಡಿ, “ಈ ಯೋಜನೆ ಅಡಿಯಲ್ಲಿ ಬ್ಯಾಂಕುಗಳಿಂದ ಸಾಲ ಸೌಲಭ್ಯ ಮತ್ತು ಸಹಾಯಧನದ ಸೌಲಭ್ಯಗಳಿದ್ದು, ಯಾವುದೇ ಬ್ಯಾಂಕ್ನಲ್ಲಿ ಈ ಯೋಜನೆ ಅಡಿಯಲ್ಲಿ ಸಾಲ ಪಡೆಯುವಾಗ ತಾಂತ್ರಿಕ ತೊಂದರೆ ಉಂಟಾದಲ್ಲಿ ತಮ್ಮನ್ನು ಸಂಪರ್ಕಿಸಬಹುದು. ಈ ಮೂಲಕ ವಿವಿಧ ಉದ್ಯಮಗಳನ್ನು ಸ್ಥಾಪಿಸಿ ಆರ್ಥಿಕವಾಗಿ ಲಾಭ ಹೊಂದುವಂತಾಗಬೇಕು.

ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಿದ್ದು ಪೂಜಾರಿ ಪಿಎಂಎಫ್ಎಮ್ಇ ಯೋಜನೆಯ ವರದಿ ತಯಾರಿಕೆ, ಸಲ್ಲಿಸುವಿಕೆ, ಅನುಮೋದನೆ, ಉದ್ಯಮ ಸ್ಥಾಪನೆವರೆಗೆ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶ ಪಾರ್ವತಿ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಅಧಿಕಾರಿ ಗೀತಾ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಮೂರು ದಿವಸಗಳ ಅವಧಿಯಲ್ಲಿ ತರಬೇತಿಯಲ್ಲಿ ಫಲಾನುಭವಿಗಳಿಗೆ ಹಮ್ಮಿಕೊಂಡ ವಿವಿಧ ಚಟುವಟಿಕೆಗಳ ಕುರಿತು ವಿವರಣೆ ನೀಡಿದರು. ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಯೋಜನೆಯ ವಿವಿಧ ಫಲಾನುಭವಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...