ವಿಜಯಪುರ | ಬೆರಗು ಪ್ರಕಾಶನದ ಸಾಹಿತ್ಯ ಪ್ರಶಸ್ತಿ ಪ್ರಕಟ; ʼಯುದ್ಧ ಮೃದಂಗʼಕ್ಕೆ ಪೋತೆ ಪ್ರಶಸ್ತಿ

Date:

ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆ ಕೊಡಮಾಡುವ ರಾಜ್ಯಮಟ್ಟದ ಸಾಹಿತ್ಯ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದೆ.

2025ನೇ ಸಾಲಿನ ಪ್ರೊ. ಎಚ್ ಟಿ ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಸಿಂದಗಿ ದೇವೂ ಮಾಕೊಂಡ ಅವರ ʼಯುದ್ಧ ಮೃದಂಗʼ ಅನುವಾದಿತ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರೊ. ಎಚ್ ಟಿ ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಡಾ. ಪದ್ಮಿನಿ ನಾಗರಾಜು ಅವರ ʼಸಮುದ್ರದ ಕೆರೆಯ ಸರಿಸಿʼ ಕಥಾ ಸಂಕಲನ ಹಾಗೂ ವಿಜಯಪುರದ ಡಾ. ಸುಜಾತ ಚಲವಾದಿ ಅವರ ʼಲಚಮವ್ವ ಮತ್ತು ಇತರ ಕಥೆಗಳುʼ 2024ರ ಕೃತಿಗಳು ಆಯ್ಕೆಯಾಗಿವೆ. ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ 2024ರ ಸಾಲಿನ ಸೃಜನೇತರ ವಿಭಾಗದ ಪುಸ್ತಕ ಪ್ರಶಸ್ತಿಗೆ ಬಾಗಲಕೋಟೆಯ ಮಹಾದೇವ ಬಸರಕೋಡ ಅವರ ʼಸುರಧೇನುʼ ಮತ್ತು ತುಮಕೂರಿನ ಅನಂತ ಕುಣಿಗಲ್ ಅವರ ‘ಅಪ್ಪನ ಆಟೋಗ್ರಾಫ್’ ಕೃತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶಾನ ಸಂಸ್ಥೆಯ ವಿಜಯಲಕ್ಷ್ಮಿ ಆರ್ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆರಗು ಪ್ರಕಾಶನವು ಕಳೆದ 6 ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು, ಪ್ರಸಕ್ತ ವರ್ಷದ ಪ್ರಶಸ್ತಿಗೆ 118 ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ 57 ಹಸ್ತಪ್ರತಿಗಳು ನಾಡಿನ ವಿವಿಧ ಬಾಗಗಳಿಂದ ಮತ್ತು ಮಹಾರಾಷ್ಟ್ರ, ಕೇರಳ ಹಾಗೂ ಇತರೆ ರಾಜ್ಯಗಳಿಂದ ಬಂದಿದ್ದವು. ಖ್ಯಾತ ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ವಿಜಯಪುರದ ಸಾಹಿತಿ ಶಂಕರ ಬೈಚಬಾಳ ಅವರು ತೀರ್ಪುಗರರಾಗಿ ಕಾರ್ಯನಿರ್ವಾಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳೆ ಆತ್ಮರಕ್ಷಣೆ ಕಲೆ ಕಲಿಯುವುದು ಅನಿವಾರ್ಯ: ಪ್ರೊ. ನಾಮದೇವಗೌಡ

ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ರೂ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂದಿದ್ದು, ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸುವ ಮೂಲಕ ಗೌರವಿಸಲಿದೆ ಹಾಗೂ ಪುಸ್ತಕ ಪ್ರಶಸ್ತಿ ಐದು ಸಾವಿರ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆ ಒಳಗೊಂಡಿದ್ದು, ಜನವರಿ 2026ರ ಮೊದಲ ವಾರ ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...