ವಿಜಯಪುರ | ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರವರು ಭಗತ್‌ ಸಿಂಗ್:‌ ಶರಣಪ್ಪ ಉದ್ದಾಳ

Date:

ಭಗತ್ ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬ್ರಿಟಿಷರ ನಂತರ ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರವರು ಎಂದು ವಿಜಯಪುರ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ದಾಳ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಎಸ್ ಬಿ ವಿಜ್ಜಮ್ಮ ಕರಿಯರ್ ಅಕಾಡೆಮಿಯಲ್ಲಿ ವಿಜಯಪುರ ನಗರದ ಎಸ್‌ಬಿ ವಿಜ್ಜಮ್ ಕೆರಿಯರ್ ಅಕಾಡೆಮಿಯಲ್ಲಿ ಎಐಡಿವೈಓ ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಗಾಂಧೀಜಿ ಸಂಧಾನಪರ ಪಂಥದ ನಾಯಕರಾದರೆ, ಭಗತ್ ಸಿಂಗ್, ನೇತಾಜಿ ಅವರು ಸಂಧಾನರಹಿತ ಪಂಥದ ಅಗ್ರಗಣ್ಯ ನಾಯಕರು. ಸಂಧಾನಪರ ಪಂಥದವರು ಕೆಲವು ಸವಲತ್ತುಗಳಿಗಾಗಿ ಬ್ರಿಟಿಷ್ ಸರ್ಕಾರಕ್ಕೆ ಮನವಿ ಕೊಡುವುದಕ್ಕೆ ಸೀಮಿತವಾಗಿದ್ದರು. ಆದರೆ ಸಂಧಾನಾತೀತ ಪಂಥವು ಬ್ರಿಟಿಷರು ದೇಶ ಬಿಟ್ಟು ತೊಲಗಬೇಕು. ನಂತರ ದೇಶದಲ್ಲಿರುವ ಜಾತಿ-ಮತಗಳ ಅಸಮಾನತೆ ಇಲ್ಲದ, ದೇಶದ ಬೆನ್ನೆಲುಬಾದ ರೈತರ ಸಂಕಷ್ಟಗಳನ್ನು ದೂರ ಮಾಡುವ, ಮಹಿಳೆಗೆ ಸಮಾನತೆ ಹಾಗೂ ಭದ್ರತೆ ಖಾತ್ರಿಪಡಿಸುವ, ಎಲ್ಲರಿಗೂ ಉಚಿತ ಶಿಕ್ಷಣ, ಉದ್ಯೋಗ ನೀಡುವ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಆದರೆ ಆ ಕನಸು ಇಂದಿನ ನಮ್ಮ ಭ್ರಷ್ಟ ಆಳ್ವಿಕರು ನುಚ್ಚುನೂರು ಮಾಡಿದ್ದಾರೆ. ಭಗತ್ ಸಿಂಗ್ ಅವರ ಉತ್ತರಾಧಿಕಾರಿಗಳಾಗಿ ನಾವು ಸಮಸಮಾಜಕ್ಕಾಗಿ ಎಲ್ಲ ಯುವಜನರನ್ನು ಸಂಘಟಿಸಿ ಹೋರಾಟ ಬೆಳೆಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಮಖಂಡಿ | ದೀನದಲಿತರ ಉದ್ಧಾರಕ್ಕಾಗಿಯೇ ಗೌತಮ ಬುದ್ಧ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿದೆ: ಧಮ್ಮಪಾಲ ಬಂತೇಜಿ

ಆಧ್ಯಕ್ಷತೆ ವಹಿಸಿದ್ದ ಎಐಡಿವೊ ಜಿಲ್ಲಾ ಕಾರ್ಯದರ್ಶಿ ಸಿದ್ರಾಮ ಹಿರೇಮಠ ಮಾತನಾಡಿ, “ಈ ದೇಶದಲ್ಲಿ ಮಾನವನಿಂದ ಮಾನವನ ಶೋಷಣೆ ಕೊನೆಗೊಂಡು ಎಲ್ಲರೂ ಶಿಕ್ಷಣ, ಉದ್ಯೋಗ ಭದ್ರತೆ ಪಡೆಯುವಂತಾಗಲಿ ಎಂಬ ಕನಸನ್ನು ಭಗತ್ ಸಿಂಗ್ ಕಂಡರು. ಅಂತಹ ಒಂದು ಸಮಾಜವಾದಿ ಭಾರತದ ಕನಸನ್ನು ನನಸು ಮಾಡುವ ಜವಾಬ್ದಾರಿ ಇಂದು ನಮ್ಮ ಮೇಲಿದೆ. ಇಂದಿನ ಯುವಜನರು ಭಗತ್ ಸಿಂಗ್‌ ಅವರ ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಇಂದು ಸಮಾಜದಲ್ಲಿ ಯುವಜನರು ಆನ್‌ಲೈನ್ ಗೇಮ್, ಅಶ್ಲೀಲ ಸಿನಿಮಾ-ಸಾಹಿತ್ಯಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಂಡವಾಳಶಾಹಿ ವ್ಯವಸ್ಥೆಯ ಆಳ್ವಿಕರು ಯುವಜನರ ಬೆನ್ನೆಲುಬು ಮುರಿಯುವ ಹುನ್ನಾರಗಳನ್ನು ಮಾಡುತ್ತಿದ್ದಾರೆ. ಯುವಜನರು ಜಾತಿ-ಧರ್ಮಗಳ ಮೂಲಕ ಹಂಚಿಹೋಗದೆ ಒಗ್ಗಟ್ಟಾಗಿ ಈ ವ್ಯವಸ್ಥೆಯ ಹುನ್ನಾರವನ್ನು ಸೋಲಿಸಬೇಕು” ಎಂದು ಕರೆ ನೀಡಿದರು.

ಉಪಾಧ್ಯಕ್ಷ ಅಶೋಕ್ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಕೊಂಡಗೂಳಿ, ಕಾಂತು ನಾಯಕ ಮುಂತಾದವರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...