ವಿಜಯಪುರ | ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ನಡೆದಿದೆ.

ಹಿರೇಮುರಾಳ ಗ್ರಾಮದ ಸಂಗಮೇಶ ಛಲವಾದಿ (35) ಮೃತಪಟ್ಟ ವ್ಯಕ್ತಿ.

ಸಂಗಮೇಶ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನ್ನ ಕೆಲಸ ಮುಗಿದ ನಂತರ ಬೈಕ್ ನಲ್ಲಿ ತನ್ನೂರಿಗೆ ಹೊರಟಿದ್ದರು. ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ವೇಗವಾಗಿ ಬರುತ್ತಿರುವುದನ್ನು ಕಂಡು ಬೈಕ್‌ ಅನ್ನು ಪಕ್ಕದಲ್ಲಿ ನಿಲ್ಲಿಸಿದ್ದ. ಆದರೆ ಆತನ ಹತ್ತಿರ ಬರುತ್ತಿದ್ದಂತೆ ಟ್ರ್ಯಾಕ್ಟರ್ ಎಂಜಿನ್ ಮುಂದಕ್ಕೆ ಚಲಿಸುವಾಗ ಹಿಂಭಾಗದ ಟ್ರ್ಯಾಲಿಗಳು ಕಬ್ಬು ಸಮೇತ ಆಯತಪ್ಪಿ ಆತನ ಮೇಲೆ ಬಿದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
bijapur

ಘಟನೆ ನಡೆದ ಕೂಡಲೇ ಇನ್ನೂ ಉಸಿರಾಡುತ್ತಿದ್ದ ಆತನನ್ನು ಹೊರಗೆ ತೆಗೆಯಲು ಸ್ಥಳೀಯರು ಜೆಸಿಬಿ ತರಿಸಲು ಯತ್ನಿಸಿದರೂ ಸಕಾಲಕ್ಕೆ ಜೆಸಿಬಿ ದೊರೆಯದ ಕಾರಣ ಆತ ತೀವ್ರ ನೋವಿನಿಂದ ಒದ್ದಾಡಿ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಬುಲ್ಡೋಜರ್ ನ್ಯಾಯ’ ನಿಷೇಧ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಧಾವಿಸಿ, ಕಾನೂನು ಕ್ರಮ ಕೈಕೊಂಡಿದ್ದಾರೆ. ಕಾರ್ಖಾನೆಗೆ ಕಬ್ಬು ಹೊತ್ತು ತರುವ ಟ್ರ್ಯಾಕ್ಟರ್‌ಗಳ ಚಾಲಕರು ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬರುತ್ತಾರೆ. ಇದನ್ನು ನಿಯಂತ್ರಿಸುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರೂ ಅವರು ನಿರ್ಲಕ್ಷ್ಯ ತೋರಿದ್ದು ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...