ವಿಜಯಪುರ | ಬನೋಶಿ ಗ್ರಾಮದಲ್ಲಿ ಯುವತಿಯ ಶವ ಪತ್ತೆ ಪ್ರಕರಣ; ಮಹಿಳಾ ಸಂಘಟನೆ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾಗಿದ್ದ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ವಿಜಯಪುರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಎಐಎಮ್ಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ ಮಾತನಾಡಿ, “ದೇಶದಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದಕ್ಕೆ ನಮ್ಮ ಜಿಲ್ಲೆಯೂ ಹೊರತಾಗಿಲ್ಲ. ಇಂದು ಮಾಧ್ಯಮಗಳು ಹೆಣ್ಣು ಮಕ್ಕಳನ್ನು ಭೋಗದವಸ್ತು ಎಂಬಂತೆ ಚಿತ್ರಿಸುತ್ತಿವೆ. ವೆಬ್‌ಸೈಟ್ಗಳಲ್ಲಿ ಅಶ್ಲೀಲತೆ ಪ್ರಚಾರ ಮಾಡುತ್ತಿವೆ. ಇದರಿಂದಾಗಿ ಸಮಾಜ ಸಾಂಸ್ಕೃತಿಕ ಅಧಃಪತನದತ್ತ ಸಾಗುತ್ತಿದೆ. ಇತ್ತೀಚೆಗೆ ಐದು ವರ್ಷದ ಹಸುಳೆ ತನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಅದರಂತೆ ದಸರಾ ಸಂದರ್ಭದಲ್ಲಿ ಬಲೂನ್ ಮಾರುವ ಅಪ್ರಾಪ್ತ ಮಗುವಿನ ಮೇಲೆ ದೌರ್ಜನ್ಯವೆಸಗಿದ ಭೀಕರ ಘಟನೆಯ ಆಘಾತ ಇನ್ನೂ ನಾಡಿನ ಜನತೆ ಮರೆತಿಲ್ಲ. ಹೀಗಿರುವಾಗಲೇ ಅಂತಹುದೇ ಘಟನೆ ಮರುಕಳಿಸಿದೆ”

“ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯನ್ನು ಅಪಹರಿಸಿ 12 ತಾಸುಗಳ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾದ ಈ ಘಟನೆ ಬಗ್ಗೆ ಸೂಕ್ತವಾದ /ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮನವಿ

ಪ್ರತಿಭಟನೆಯನ್ನು ಉದ್ದೇಶಿಸಿ ಎಐಎಮ್‌ಎಸ್‌ಎಸ್‌ನ ಜಿಲ್ಲಾ ಅಧ್ಯಕ್ಷೆ ಗೀತಾ ಎಚ್ ಹಾಗೂ ಮೀನಾಕ್ಷಿ ಸಿಂಘ, ನೀಲಾಂಬಿಕೆ, ಶಶಿಕಲಾ ಮಾತನಾಡಿ ಜಿಲ್ಲೆಯ ಎಲ್ಲಾ ಪ್ರಜ್ಞಾವಂತರು ಇದನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಅಮೂಲ್ಯ, ಸುಪ್ರೀತಾ ಚಲವಾದಿ, ಐಶ್ವರ್ಯ ಜಾದವ, ಭಾಗ್ಯಲಕ್ಷ್ಮೀ, ನೀಲಾಂಬಿಕಾ,,ಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...