ವಿಜಯಪುರ | ಹೂಡಿಕೆ ಕ್ಷೇತ್ರಕ್ಕೆ ವ್ಯಾಪಾರ ಕೌಶಲ್ಯ ಅತ್ಯಗತ್ಯ: ಶಂಕರಗೌಡ ಸೋಮನಾಳ

Date:

ಇಂದಿನ ಯುಗದಲ್ಲಿ ತೆರಿಗೆ ಸಲ್ಲಿಕೆ ಮತ್ತು ಶೇರು ಮಾರುಕಟ್ಟೆ ವ್ಯಾಪಾರ ಕೌಶಲ್ಯಗಳೆರಡೂ ವ್ಯಕ್ತಿಯ ಹಣಕಾಸು ಸಾಮರ್ಥ್ಯವನ್ನು ನಿರ್ಧರಿಸುವ ಪ್ರಮುಖ ಸಾಧನಗಳಾಗಿವೆ ಎಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅಭಿಪ್ರಾಯಪಟ್ಟರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗ ಆಯೋಜಿಸಿದ್ದ ʼಹಣಕಾಸು ಸಾಮರ್ಥ್ಯ ನಿರ್ಮಾಣ: ತೆರಿಗೆ ಸಲ್ಲಿಕೆ ಮತ್ತು ಷೇರು ಮಾರುಕಟ್ಟೆ ವ್ಯಾಪಾರಗಳ ಕೌಶಲ್ಯʼ ವಿಷಯ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉದ್ಯಮ, ಹಣಕಾಸು ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಉದ್ಯೋಗೋಚಿತ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಅಲ್ಲದೇ ಇಂತಹ ಕೌಶಲ್ಯಗಳು ಭವಿಷ್ಯದ ವೃತ್ತಿಜೀವನದಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಂಗಳೂರಿನ ನಾಗರಬಾವಿಯ ಕೆಎಲ್‌ಇ ಸೊಸೈಟಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್ ಮದನ್ ಕುಮಾರ್ ಮಾತನಾಡಿ, “ಸ್ಟಾಕ್ ಮಾರ್ಕೆಟ್‌ನ ಮೂಲಭೂತ ತತ್ವಗಳು, ಹೂಡಿಕೆಯ ಆಯಾಮಗಳು, ಡಿಜಿಟಲ್ ಹೂಡಿಕೆ ವೇದಿಕೆಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬೇಕಾದ ಸುರಕ್ಷಿತ ಹೂಡಿಕೆ ಕ್ರಮಗಳನ್ನು ತಿಳಿದುಕೊಂಡು ಮುಂದುವರೆಯುವುದು ಸೂಕ್ತ” ಎಂದರು.

ಇದನ್ನೂ ಓದಿ: ವಿಜಯಪುರ | ಕನ್ನೇರಿ ಶ್ರೀ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಆಗ್ರಹ

ಬೆಂಗಳೂರಿನ ಸ್ಟಾಕ್ ಮಾರ್ಕೆಟ್ ಇನ್‌ಸ್ಟಿಟ್ಯೂಟ್ ತರಬೇತುದಾರರು ಡಾ.ದರ್ಶನ್ ಎಸ್ ಅವರು, ವೈಯಕ್ತಿಕ ಹಣಕಾಸು ನಿರ್ವಹಣೆ, ತೆರಿಗೆ ದಾಖಲಾತಿಗಳ ಅವಶ್ಯಕತೆ, ಆದಾಯ ತೆರಿಗೆ ವರದಿ ಸಲ್ಲಿಕೆ ವಿಧಾನಗಳು ಹಾಗೂ ವಿದ್ಯಾರ್ಥಿಗಳಿಗೆ ಅವಶ್ಯವಿರುವ ಹಣಕಾಸು ಜ್ಞಾನ ಕುರಿತು ಪ್ರಾಯೋಗಿಕ ಉದಾಹರಣೆಗಳ ಮೂಲಕ ವಿವರಿಸಿದರು.

ಕಾರ್ಯಾಗಾರದಲ್ಲಿ ಕಾರ್ಯಕ್ರಮ ಸಂಯೋಜಕಿ ಪ್ರೊ ಅನಿತಾ ಆರ್ ನಾಟಿಕರ್, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು, ಸಂಶೋಧನಾರ್ಥಿಗಳು, ಉಪನ್ಯಾಸಕರು ಭೋದಕ ವರ್ಗ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...