ವಿಜಯಪುರ | ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾದುದು: ಡಾ.ಬಿ.ಎಂ.ಪಾಟೀಲ್

Date:

ಪ್ರಸ್ತುತ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಕ್ಷೇತ್ರದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಅಧ್ಯಾಪಕರ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರಗಳು ಮಹತ್ವಪೂರ್ಣವಾಗಿದ್ದು, ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮಾರ್ಗಗಳನ್ನು ಕಲಿಯಲು ಈ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಮ್.ಪಾಟೀಲ್ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಮತ್ತು ವ್ಯವಹಾರ ನಿರ್ವಹಣೆ ಅಧ್ಯಯನ ವಿಭಾಗಗಳು ಹಾಗೂ ನವದೆಹಲಿಯ ಐಸಿಎಸ್ಎಸ್‌ಆರ್ ಪ್ರಾಯೋಜಕತ್ವದಲ್ಲಿ ಜಂಟಿಯಾಗಿ ಆಯೋಜಿಸಿದ್ದ ‘ಶೈಕ್ಷಣಿಕ ಸಂಶೋಧನಾ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ವಾರಗಳ ‘ಸಾಮರ್ಥ್ಯ ವೃದ್ಧಿ’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

WhatsApp Image 2024 10 28 at 5.41.43 PM

ಈ ಕಾರ್ಯಾಗಾರ ದೈಹಿಕ ಶಿಕ್ಷಣ, ಸಮಾಜ ವಿಜ್ಞಾನ, ವಾಣಿಜ್ಯ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಎದುರಿಸಬೇಕಾದ ಆನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮುಖ್ಯ ವೇದಿಕೆಯಾದಂತಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಕುಪ್ಪಂ ದ್ರಾವಿಡಿಯನ್ ಯೂನಿವರ್ಸಿಟಿಯ ಡೀನ್ ಪ್ಯಾಕಲ್ಟಿ ಸ್ಕೂಲ್ ಆಫ್ ಎಜುಕೇಶನ್ ಪ್ರೊ. ಡಿ ಶ್ರೀನಿವಾಸ ಕುಮಾರ್ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಆಸಕ್ತಿಯುತ ಕ್ಷೇತ್ರದಲ್ಲಿ ಸಂಶೋಧನೆಯನ್ನು ಕೈಗೊಂಡರೆ ಉತ್ತಮವಾದ ಫಲಿತಾಂಶವನ್ನು ನೀಡಬಹುದು ಮತ್ತು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬಹುದು ಎಂದರು.

ಇದನ್ನು ಓದಿದ್ದೀರಾ? ತುಮಕೂರು | ಬಂಡೆಕಲ್ಲು, ನೀರಿನ ಮಧ್ಯೆ 12 ಗಂಟೆ ಕಳೆದಿದ್ದು ಹೇಗೆ? ಬದುಕುಳಿದ ವಿದ್ಯಾರ್ಥಿನಿ ಹೇಳಿದ್ದು ಹೀಗೆ..

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾರ್ಯಾಗಾರದ ನಿರ್ದೇಶಕ ಪ್ರೊ..ರಾಜಕುಮಾರ್ ಮಾಲಿಪಾಟೀಲ್ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಈ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದೆ ಎಂದರು.

ಕಾರ್ಯಾಗಾರದ ಸಹಸಯೋಜಕ ಡಾ. ಚಂದ್ರಶೇಖರ ಮಠಪತಿ, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...