ವಿಜಯಪುರ | ಕಲಾವಿದರಾಗಿ ಬೆಳೆದ ಮಕ್ಕಳು ಸಮಾಜದ ಸಂಪನ್ಮೂಲ ವ್ಯಕ್ತಿಗಳಾಗಬಲ್ಲರು: ಡಾ. ಬಸವರಾಜ ಗವಿಮಠ

Date:

ದೇವರು ಕೆಲ ಮಕ್ಕಳನ್ನು ಆಯ್ಕೆ ಮಾಡಿ ಕಲಾವಿದರನ್ನಾಗಿ ಸೃಷ್ಟಿಸುತ್ತಾನೆ. ಅಂತಹ ಮಕ್ಕಳು ಕುಂಚವನ್ನೇ ಹಿಡಿದು ಜೀವನ ರೂಪಿಸಿಕೊಳ್ಳಬೇಕು. ಅಂತವರು ಸಮಾಜದ ಸಂಪನ್ಮೂಲ ವ್ಯಕ್ತಿಯಾಗಿ ಬೆಳೆಯಬಲ್ಲರು ಎಂದು ವಿಜಯಪುರ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ ಗವಿಮಠ ಹೇಳಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮೊಮದಾಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೆಂಗಳೂರಿನ ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ವಿಜಯಪುರದ ರಾಜರಾಜೇಶ್ವರಿ ಮಹಿಳಾ ಕಲಾ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ʼಕಲರವʼ- ಮಕ್ಕಳಿಗಾಗಿ ತರಬೇತಿ ಕಾರ್ಯ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ಕಲಾವಿದ ಮಲ್ಲಿಕಾರ್ಜುನ ಕನ್ನೂರ ಮಾತನಾಡಿ, “ಚಿತ್ರಕಲೆ ಎಲ್ಲಾ ಭಾಷೆಯ ತಾಯಿ ಭಾಷೆಯಾಗಿದೆ. ಮಕ್ಕಳು ಚಿತ್ರಗಳ ಮೂಲಕವೇ ಅಕ್ಷರ ಅಭ್ಯಾಸವನ್ನು ಪ್ರಾರಂಭಿಸಬೇಕು. ಎಲ್ಲಾ ಶಾಲೆಗಳಲ್ಲಿಯೂ ಚಿತ್ರಕಲಾ ಶಿಕ್ಷಕರು ಇರುವುದು ಬಹಳ ಮುಖ್ಯ. ಗ್ರಾಮೀಣ ಪ್ರದೇಶದ ಮಕ್ಕಳು ದೂರದೂರಿನಲ್ಲಿ ನಡೆಯುವ ಚಿತ್ರಕಲಾ ಪ್ರದರ್ಶನಗಳನ್ನು ನೋಡಲು ಆಗುವುದಿಲ್ಲ. 800 ವಿದ್ಯಾರ್ಥಿ ಸಮೂಹ ಹೊಂದಿರುವ ಶಾಲೆಗೆ ಅಕಾಡೆಮಿಯವರು ಕಲಾಕೃತಿಗಳನ್ನು ಪ್ರದರ್ಶನಕ್ಕಾಗಿ ಇಲ್ಲಿಗೆ ಕಳಿಸಿರುವುದು ಸಂತಸದ” ಸಂಗತಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ವ್ಯಕ್ತಿ ರಮೇಶ ಸಾಸನೂರ ಮಾತನಾಡಿ, “ಪ್ರತಿಭೆ ಹುಟ್ಟುವುದು ಗ್ರಾಮೀಣ ಪ್ರದೇಶದಲ್ಲಿಯೇ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಸಿಕ್ಕರೆ ಮುಂದೆ ದೊಡ್ಡ ಕಲಾವಿದರಾಗಿ ಹೊರಹೊಮ್ಮುತ್ತಾರೆ” ಎಂದರು.

ಇದನ್ನೂ ಓದಿ: ವಿಜಯಪುರ | ವೃತ್ತಿಪರ ಬದುಕಿನಲ್ಲಿ ಕೌಶಲ್ಯಗಳ ಪಾತ್ರ ಮಹತ್ವದ್ದು: ಡಾ. ಹಾಜರಾ ಪರ್ವೀನ್

ಲಲಿತ ಕಲಾ ಅಕಾಡೆಮಿ ಸದಸ್ಯ ಸಂಚಾಲಕಿ ರಾಜೇಶ್ವರಿ ಮೋಪಗಾರ ಅವರು ಕಲಾಸಕ್ತಿಯು ಮಕ್ಕಳಿಗೆ ಕಾರ್ಯಾಗಾರ ನಡೆಸಿದರು.

ಕಾರ್ಯಕ್ರಮದಲ್ಲಿ ರಾಘವೇಂದ್ರ ಪುರೋಹಿತ, ಝಎಂ ಬಗಲಿ, ಸುಜಾತ ಮೊಗಲಿ, ಮಹಾಂತೇಶ ಪೋರಿ, ಆರ್ ಎಸ್ ಖಾನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...