ವಿಜಯಪುರ | ಶುದ್ಧ ಮತದಾರ ಪಟ್ಟಿ ಸಿದ್ಧಪಡಿಸಲು ಆಯೋಗದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ

Date:

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ, ದೋಷಮುಕ್ತವಾಗಿ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಭಾನುವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರ ಪಟ್ಟಿ ಪರಿಷ್ಕರಣಾ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮತದಾರರ ಪಟ್ಟಿ ವೀಕ್ಷಕಿ, ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ ನೀಡಿದರು.

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ 1-1-2025ಕ್ಕೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರ ಪಟ್ಟಿಯನ್ನು ಪ್ರಕಟಿಸಲಾಗಿದ್ದು,‌ ಅರ್ಹ ಯುವ ಮತದಾರರು, ವಿಶೇಷಚೇತನ ಮತದಾರರು, ಮಹಿಳೆಯರ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು. ವಿಶೇಷವಾಗಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಈ ಕುರಿತು ಜಾಗೃತಿ ಮೂಡಿಸಿ ಹೆಸರು ಸೇರ್ಪಡೆ ಮಾಡಬೇಕು. ವಿವಿಧ ಕಾಲೇಜುಗಳಲ್ಲಿ ಅಭಿಯಾನಗಳನ್ನು ಹಮ್ಮಿಕೊಂಡು ಯುವ ಮತದಾರರ ಹೆಸರು ಸೇರ್ಪಡೆಯಾಗುವಂತೆ ಪ್ರೇರೆಪಿಸಬೇಕು. ಮನೆ-ಮನೆ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ದಾಖಲಿಸಬೇಕು. ಒಬ್ಬ ಮತದಾರರ ಹೆಸರು ಎರಡೂ ಕಡೆ ಇರದಂತೆ ನೋಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಅಧಿಕಾರಿಗಳು ಜಾಗೃತ ವಹಿಸುವಂತೆ ಸೂಚಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ 1-1-2025 ರಂದು ಆರೋಗ್ಯ ನಿಯತಾಂಕಗಳನ್ನು ಪರಿಶೀಲಿಸುವುದು ಮತ್ತು ಅಂತಿಮ ಪಟ್ಟಿ ಪ್ರಕಟಣೆಗೆ ಆಯೋಗದ ಅನುಮತಿ ಪಡೆಯುವುದು. 6-1-2925ಕ್ಕೆ ಅಂತಿಮ ಮತದಾರ ಪಟ್ಟಿಯನ್ನು ಪ್ರಕಟಿಸಲಾಗುವುದು. ನವೆಂಬರ್ 28ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಅವಧಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಬಿಎಲ್‌ಎಗಳನ್ನು ನೇಮಕ ಮಾಡಿ ಶುದ್ಧ ಮತದಾರರ ಪಟ್ಟಿಗೆ ಸಹಕರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲೆಯಲ್ಲಿ ಮತದಾರರ ಪರಿಷ್ಕರಣೆಗೆ ಹಮ್ಮಿಕೊಂಡ ವಿಶೇಷ ಅಭಿಯಾನ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಚುನಾವಣಾ ತಹಶೀಲ್ದಾರ ಪ್ರೇಮಸಿಂಗ್ ಪವಾರ, ಜಿಲ್ಲೆಯ ವಿವಿಧ ತಾಲೂಕು ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಹಾಜಿಲಾಲ ದಳವಾಯಿ, ಭೋಗೇಶ ಸೋಲಾಪುರ, ಕೆ.ಆರ್.ತೊರವಿ, ರಾಜು ಹಿರೇಮಠ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...