ವಿಜಯಪುರ | ಸಿಎಸ್‌ಆರ್ ಅನುದಾನದಲ್ಲಿ ಸರ್ಕಾರಿ ಪ್ರೌಢಶಾಲೆ ನಿರ್ಮಾಣ: ಎಂ ಬಿ ಪಾಟೀಲರಿಂದ ಉದ್ಘಾಟನೆ

Date:

ಉತ್ತಮ ಮೂಲಸೌಕರ್ಯ, ಸುಸಜ್ಜಿತ ತರಗತಿ ಕೊಠಡಿಗಳು ಮತ್ತು ಕಲಿಕೆಗೆ ಅನುಕೂಲವಾದ ವಾತಾವರಣ ಮಕ್ಕಳ ಭವಿಷ್ಯಕ್ಕೆ ಹೊಸ ಚೈತನ್ಯ ತುಂಬುತ್ತವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕಣಮುಚನಾಳದಲ್ಲಿ ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಿಂದ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ನೂತನ ಪ್ರೌಢಶಾಲೆ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

“ಈ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕೆ ಇದೇ ವರ್ಷದ ಜನವರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಇದೇ ವರ್ಷಾಂತ್ಯದೊಳಗೆ ಲೋಕಾರ್ಪಣೆ ಮಾಡುವ ಭರವಸೆ ನೀಡಿದ್ದೆ. ಕಾಮಗಾರಿ ಮುಕ್ತಾಯಗೊಂಡಿದ್ದು, ಬಳಕೆಗೆ ಯೋಗ್ಯವಾಗಿದೆ. ಸಕಾಲಕ್ಕೆ ಅನುದಾನ ನೀಡಿರುವ ಸಂಸ್ಥೆಗೆ ಕೃತಜ್ಞತೆಗಳು. ಈ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಗುಣಮಟ್ಟದ ಅಡುಗೆ ಮನೆ, ಭೋಜನ ಶಾಲೆ, ಉಪಾಧ್ಯಾಯರಿಗೆ ವಿರಮಿಸಿಕೊಳ್ಳಲು ಸ್ಟಾಫ್ ರೂಂ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಆಧುನಿಕ ಶಾಲಾ ಕಟ್ಟಡವು ಗ್ರಾಮೀಣ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಹೊಸ ದಿಕ್ಕು ನೀಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಸಾಹಿತ್ಯಾಭಿರುಚಿ ಯುವಕರು ಮೈಗೂಡಿಸಿಕೊಳ್ಳಬೇಕು : ಎಸ್.ಆರ್.ಶ್ರೀನಿವಾಸ್

ಈ ವೇಳೆ ಸ್ವಾಮೀಜಿಗಳಾದ ಕಲ್ಲಯ್ಯ ಅರಕೇರಿಮಠ, ಮಲ್ಲಿಕಾರ್ಜುನ ಹಿರೇಮಠ, ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯ ಉಪಾಧ್ಯಕ್ಷ ರಮೇಶ ರಾವ್ ಮತ್ತು ಜನರಲ್ ಮ್ಯಾನೇಜರ್ ಕಿರಣ, ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ, ಬಿಇಒ ಬಸವರಾಜ ತಳವಾರ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಮುಖಂಡರಾದ ವಿದ್ಯಾರಾಣಿ ತುಂಗಳ, ಮಹಾದೇವ ನಾಟೀಕಾರ, ಮಲ್ಲು ಕಲಾದಗಿ, ವಿಠ್ಠಲ ನಾಟೀಕಾರ, ಮಾದುರಾಯಗೌಡ ಬಿರಾದಾರ, ನಿಂಗೊಂಡ ಬಿರಾದಾರ, ದೇವಾನಂದ ಲಚ್ಯಾಣ, ಕಣಮುಚನಾಳ, ಸಾರವಾಡ, ಧನ್ಯಾಳ, ಅತಾಲಟ್ಟಿ ಗ್ರಾಮಗಳ ನಾನಾ ಮುಖಂಡರು ಇದ್ದರು. ಶಾಲೆಯ ಮುಖ್ಯ ಶಿಕ್ಷಕ ಆರ್ ಬಿ ಪಾಟೀಲ ಸ್ವಾಗತಿಸಿದರು. ಸಹ ಶಿಕ್ಷಕ ಪ್ರಕಾಶ ಮನ್ನಿಕೇರಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...