ವಿಜಯಪುರ | ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ; ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!

Date:

ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಹೇಳಿದರು.

ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರ ಎಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ” ಎಂಬ ಆರೋಪವಿದೆ.

“ಅನಿರೀಕ್ಷಿತ ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ತುತ್ತಾಗಿದ್ದಾರೆ. ಒಟ್ಟಾರೆಯಾಗಿ, ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿಬಂದಿವೆ. ಇದರ ಕುರಿತು ಸೂಕ್ತ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ್ ಮಾತನಾಡಿ, “ಈ ಮುಂಚೆ ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲವೆಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ

“ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ. ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.

ಎಐಡಿಎಸ್ಓ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಶಿಲ್ಪಾ ಬಿ ಕೆ ಸೇರಿದಂತೆ ಹಲವು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...