ವಿಜಯಪುರ | ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ; ಪ್ರೊ. ಪಿ.ಜಿ. ತಡಸದ

Date:

ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ʼಗ್ರಾಫಿಕ್ ಡಿಸೈನಿಂಗ್ʼ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಾವುದು ಅಕ್ಷರಗಳಲ್ಲಿ ಹೇಳಲು ಅಸಾಧ್ಯವೊ ಅಂತಹದ್ದನ್ನು ನಾವು ಒಂದು ಗ್ರಾಫಿಕ್ ಮೂಲಕ ತಿಳಿಸಬಹುದು. ಸಾವಿರಾರು ಅಕ್ಷರಗಳಲ್ಲಿ ಹೇಳುವ ಮಾಹಿತಿಯನ್ನು ಬರೀ ಒಂದು ಚಿತ್ರದ ಮೂಲಕ ತಿಳಿಸುವ ಶಕ್ತಿ ಗ್ರಾಫಿಕ್‌ಗೆ ಇದೆ. ಗ್ರಾಫಿಕ್ ಡಿಸೈನ್ ಬರೀ ಒಂದು ಕ್ಷೇತ್ರದಲ್ಲಿ ಮಾತ್ರವಲ್ಲ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಆದ ಕಾರಣ ನೀವೆಲ್ಲರು ಅದರ ಸದುಪಯೋಗವನ್ನು ಮತ್ತು ಅದರ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ಡಿಜಿಟಲ್ ಮಾಧ್ಯಮ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಹೊಂದುತ್ತಿದ್ದು, ಗ್ರಾಫಿಕ್ ಡಿಸೈನ್‌ಗೆ ಪ್ರಸ್ತುತ ದಿನಮಾನಗಳಲ್ಲಿ ಅತೀ ಹೆಚ್ಚಿನ ಬೇಡಿಕೆ ಇದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಗ್ರಾಫಿಕ್ ಡಿಸೈನರ್‌ಗಳು ಸಿಗುತ್ತಿಲ್ಲ. ಇದರ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿನಿಯರು ವೃತ್ತಿ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಕಾರ್ಯಾಗಾರದಲ್ಲಿ ಮುಂಬರುವ ದಿನಗಳಲ್ಲಿ ಬಹಳಷ್ಟು ಸಹಾಯಕಾರಿಯಾಗಿದ್ದು, ಇದನ್ನು ನೀವು ರೂಢಿಗತ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಎರಡು ದಿನಗಳ ಕಾಲ ನಡೆದ ಈ ಕಾರ್ಯಗಾರದ ಕುರಿತು ವಿದ್ಯಾರ್ಥಿನಿಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ಮತ್ತು ಪ್ರಜಾವಾಣಿ ಪತ್ರಿಕೆಯ ಗ್ರಾಫಿಕ್ ಡಿಸೈನರ್ ಮಂಜುನಾಥ ಹುಲಕೊಪ್ಪದ ಹಾಗೂ ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸಹಾಯಕ ಪ್ರಾಧ್ಯಾಪಕಿ ಡಾ. ತಹಮೀನಾ ಸುಲ್ತಾನ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ದೀಪಾ ತಟ್ಟಿಮನಿ ನಿರೂಪಿಸಿದರು. ಸುಷ್ಮಾ ಪವರ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...