ವಿಜಯಪುರ | ಮರ್ಯಾದೆಗೇಡು ಹತ್ಯೆ: ಗರ್ಭಿಣಿಯನ್ನು ಕೊಂದಿದ್ದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

Date:

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್‌ ಕೋರ್ಟ್‌ ಅದೇಶ ಹೊರಡಿಸಿದೆ. ಅಪರಾಧಿಗಳಿಗೆ ದಂಡವನ್ನೂ ವಿಧಿಸಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಾಳಾಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಮತ್ತು ಅದೇ ಗ್ರಾಮದ ಸಾಯಬಣ್ಣ ಕೊಣ್ಣೂರ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಬಾನು ಅವರ ಕುಟುಂಬ ಒಪ್ಪಿರಲಿಲ್ಲ. 2017ರಲ್ಲಿ ಅವರು ಊರು ತೊರೆದು ಹೋಗಿ, ವಿವಾಹವಾಗಿದ್ದರು. ದೂರದ ಊರಿನಲ್ಲಿ ವಾಸವಾಗಿದ್ದರು.

ಕೆಲ ತಿಂಗಳಗಳ ಬಳಿಕ ಗರ್ಭಿಣಿಯಾಗಿದ್ದ ಬಾನು ಹೆರಿಗೆಗಾಗಿ ಸಾಯಬಣ್ಣ ಅವರ ಮನೆಗೆ ಬಂದಿದ್ದರು. ಆಗ, ದಂಪತಿಗಳನ್ನು ಹತ್ಯೆ ಮಾಡಲು ಬಾನು ಕುಟುಂಬ ಮುಂದಾಗಿತ್ತು. ಸಾಯಬಣ್ಣ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು. ಸಾಯಬಣ್ಣ ಅವರು ಹಲ್ಲೆಯಿಂದ ತಪ್ಪಿಇಕೊಂಡಿದ್ದರು. ಆದರೆ, ಬಾನು ತಪ್ಪಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆಯಿಂದ ಬಾನು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮೂರ್ಛೆಹೋಗಿದ್ದ ಆಕೆಯ ಮೇಲೆ ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಆಕೆಯ ಕುಟುಂಬಸ್ಥರೇ ಆಕೆಯನ್ನು ಕೊಂದಿದ್ದರು.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ, ಅಪರಾಧಿ ಇಬ್ರಾಹಿಂಸಾಬ್ ಅತ್ತಾರ ಮತ್ತು ಅಕ್ಬರಸಾಬ್ ಅತ್ತಾರಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ರಂಜಾನಬಿ ಅತ್ತಾರ, ದಾವಲಬಿ ಜಮಾದಾರ್, ಅಜ್ಮಾ ದಖನಿ, ಜಿಲಾನಿ‌ ದಖನಿ, ಅಬ್ದುಲ್ ಖಾದರ್ ದಖನಿ, ದಾವಲಭಿ ಧನ್ನೂರಗೆ ಜೀವಾವಧಿ‌ ಶಿಕ್ಷೆ ಮತ್ತು 4.19 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...