ವಿಜಯಪುರ | ʼಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾ ನಮ್ಮ ದೈನಂದಿನ ಬದುಕಿನ ನಿಜವಾಸ್ತವ ತೋರಿಸುತ್ತದೆ: ಶಶಾಂಕ ಸೋಗಲ್

Date:

ವೈವಿಧ್ಯತೆಯ ಮಧ್ಯೆ ಸಾಮರಸ್ಯದ ಬದುಕಿನ ಮುನ್ನೋಟವನ್ನು ಪ್ರತಿನಿಧಿಸುವ ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ನಮ್ಮಯ ದೈನಂದಿನ ಬದುಕಿನ ನಿಜವಾಸ್ತವವನ್ನು ತೋರಿಸುತ್ತದೆ ಎಂದು ಸಿನೆಮಾದ ನಿರ್ದೇಶಕ ಶಶಾಂಕ ಸೋಗಲ್ ಅಭಿಪ್ರಾಯಪಟ್ಟರು.

ಆವಿಷ್ಕಾರ, ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ವಿಜಯಪುರದ 13ನೇ ಸಾಂಸ್ಕೃತಿಕ ಜನೋತ್ಸವ’ದ ಎರಡನೇ ದಿನ ಡೇರ್ ಡೆವಿಲ್ ಮುಸ್ತಾಫಾ ಸಿನೆಮಾ ಪ್ರದರ್ಶನದ ನಂತರದ ಸಂವಾದದಲ್ಲಿ ಮಾತನಾಡಿದರು.

“ಪೂರ್ಣಚಂದ್ರ ತೇಜಸ್ವಿಯವರ ಆಶಯ ಈಗಲೂ ಪ್ರಸ್ತುತವಾಗಿದೆ. ನಮ್ಮ ಸಿನಿಮಾ ಕೇವಲ ಮನರಂಜನೆಗಲ್ಲದೆ ಜನರಿಗೆ ಒಂದು ಸಂದೇಶ ತಲುಪಿಸುವ ಉದ್ದೇಶ ಹೊಂದಿದೆ. ಡೇರ್‌ಡೆವಿಲ್ ಮುಸ್ತಫಾ ಕಥೆ ನನ್ನಲ್ಲಿರುವ ಪೂರ್ವಾಗ್ರಹ ಪೀಡಿತವನ್ನು ಹೊಡೆದು ಹಾಕಿತು. ಹಾಗೆಯೇ ಜನರಲ್ಲಿರುವ ಪೂವಾಗ್ರಹ ಪೀಡಿತವನ್ನು ಹೊಡೆದೋಡಿಸಿ ಜನರು ಪರಸ್ಪರ ಸಾಮರಸ್ಯದಿಂದ ಬದುಕುವ ಸಂದೇಶ ನೀಡಲು ಈ ಸಿನಿಮಾ ತೆಗೆಲಾಯಿತು. ನನ್ನ ಸಿನೆಮಾಗಳಲ್ಲಿ ಹೀರೋ, ವಿಲನ್‌ಗಳು ಇರುವುದಿಲ್ಲ. ಜನರಿಗೆ ವಿಚಾರಗಳು ತಲುಪಿಸುವ ನಿಟ್ಟಿನಲ್ಲಿ ನನ್ನ ಸಿನಿಮಾಗಳು ಇರುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿನಿಮಾಗಳು ಜನತೆಯ ನೈಜ ಸಮಸ್ಯೆಗಳನ್ನು ಚಿತ್ರಿಸುವುದರ ಜತೆಗೆ ಸಮಾಜದಲ್ಲಿ ಹೊಸ ಬದಲಾವಣೆಯನ್ನು ನಿರೀಕ್ಷಿಸುವಂತಿರಬೇಕು. ಈ ಸಿನೆಮಾ ಅಂತಹ ಸೌಹಾರ್ದತೆಯನ್ನು ಜಾಗೃತಗೊಳಿಸುವ ಕೆಲಸ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೇಂದ್ರಕ್ಕೆ ಇಚ್ಛಾಶಕ್ತಿ ಇದ್ದಿದ್ದರೆ ಶ್ರೀಗಳಿಗೆ ʼಭಾರತ ರತ್ನʼ ದೊರಕುತಿತ್ತು: ಗೃಹ ಸಚಿವ ಪರಮೇಶ್ವರ್

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಕೇಂದ್ರ ಬಿಂದುವಾದ ನಾಯಕ ನಟ ಶಿಶಿರ ಬೈಕಾಡಿ ಮಾತನಾಡಿ, “ನಮ್ಮೆಲ್ಲ ಪೂರ್ವಗ್ರಹಗಳನ್ನು ಒಂದೆಡೆ ಇಟ್ಟು ಮುಕ್ತ ಮನಸ್ಸಿನಿಂದ ಸಿನಿಮಾವನ್ನು ವೀಕ್ಷಿಸಬೇಕು. ಸಿನಿಮಾಗಳು ಕೇವಲ ಮನರಂಜನೆಯ ಸಾಧನಗಳಾಗದೇ ನಮ್ಮನ್ನು ಚಿಂತನೆಗೆ ಹಚ್ಚುವಂತಿರಬೇಕು. ಜತೆಗೆ ಹೊಸ ಹೊಸ ಪ್ರಶ್ನೆಗಳನ್ನು ಹುಟ್ಟು ಹಾಕುವಂತಿರಬೇಕು” ಎಂದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ, ಎಐಎಂಎಸ್‌ಎಸ್ ಜಿಲ್ಲಾ ಚಾಲಕಿ ಶಿವಬಾಳಮ್ಮ ಕೊಂಡಗೂಳಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...