ವಿಜಯಪುರ‌ | ಆರ್‌ಎಸ್‌ಎಸ್ ವಿರುದ್ಧದ ಸಚಿವ ಪ್ರಿಯಾಂಕ್ ಖರ್ಗೆಯ ಹೋರಾಟಕ್ಕೆ ದಸಂಸ ಬೆಂಬಲ

Date:

ದೇಶದ ಕಾನೂನಿನನ್ವಯ ನೋಂದಣಿ ಆಗದೇ ಇರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್) ಸರ್ಕಾರಿ/ಅನುದಾನಿತ ಶಾಲಾ-ಕಾಲೇಜು ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ, ದೊಣ್ಣೆ ಹಿಡಿದು ಪಥಸಂಚಲನ ಸೇರಿದಂತೆ ಇನ್ನಿತರ ಜನವಿರೋಧಿ, ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಪ್ರತಿರೋಧ ವ್ಯಕ್ತಪಡಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರಂಭಿಸಿರುವ ‘ಸೈದ್ಧಾಂತಿಕ ಹೋರಾಟ’ವನ್ನು ವಿಜಯಪುರ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಬಣ ಬೆಂಬಲಿಸುತ್ತಿದೆ ಎಂದು ಮಂಜುನಾಥ ಕಟ್ಟಿಮನಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಎತ್ತಿರುವ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಹತಾಶೆಯಲ್ಲಿರುವ ಆರ್‌ಎಸ್‌ಎಸ್ ಮತ್ತು ಬಿಜೆಪಿಯು ಪ್ರಿಯಾಂಕ್ ಖರ್ಗೆ ಮತ್ತವರ ಕುಟುಂಬದ ಮೇಲೆ ವೈಯಕ್ತಿಕವಾಗಿ ಕ್ಷುಲ್ಲಕ ದಾಳಿ ನಡೆಸುತ್ತಾ ದ್ವೇಷ ಕಾರುತ್ತಿರುವುದನ್ನು ಹಾಗೂ ‘ಪ್ರಿಯಾಂಕ್ ಖರ್ಗೆ ಅವರ ಮನೆಗೇ ನುಗ್ಗುತ್ತೇವೆ’ ಎಂದು ಬೆದರಿಕೆ ಹಾಕಿರುವ ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಅವರ ಗೂಂಡಾಗಿರಿ ನಡೆಯನ್ನು ದಲಿತ ಸಂಘರ್ಷ ಸಮಿತಿ ಸಂಯೋಜಕ ತೀವ್ರವಾಗಿ ಖಂಡಿಸಿದೆ.

ವಾಸ್ತವವಾಗಿ ಪಥಸಂಚಲನ ಮಾಡುವ ಅಧಿಕಾರ ಸಾಂವಿಧಾನಿಕವಾಗಿ ಇರುವುದು ಪೊಲೀಸ್ ಮತ್ತು ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್‌ಎಸ್‌ಎಸ್ ಸೇರಿದಂತೆ ಇತರ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ-ಪ್ರತಿಭಟನೆ ಮಾಡಬಹುದೇ ಹೊರತು, ‘ಪಥಸಂಚಲನ’ವನ್ನಲ್ಲ. ಆದ್ದರಿಂದ ಸರ್ಕಾರ ದೃಢ ನಿಲುವು ತಾಳುವುದರ ಮೂಲಕ ಆರ್‌ಎಸ್ ಎಸ್ ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಅನುಮತಿ ನೀಡಬಾರದು ಎಂದು ದಸಂಸ ಒಕ್ಕೂಟವು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

ಆರ್‌ಎಸ್‌ಎಸ್ ಮೆರವಣಿಗೆ ಮಾಡಲು ಬಯಸಿದರೆ ಅದಕ್ಕೆ ನಮ್ಮ ಆಕ್ಷೇಪಣೆ – ತಕರಾರು ಇಲ್ಲ ಆದರೆ, ಮಾರಕಾಸ್ತ್ರಗಳಲ್ಲಿ ಒಂದಾದ ದೊಣ್ಣೆ ಹಿಡಿದು ಮೆರವಣಿಗೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲದೆ ಇರುವುದರಿಂದ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಆರ್ ಎಸ್ ಎಸ್ ನ ಈ ಸಂವಿಧಾನ ವಿರೋಧಿ ನಡೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...