ವಿಜಯಪುರ | ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆಗಳ ವಿರುದ್ಧ ದಸಂಸ ಪ್ರತಿಭಟನೆ

Date:

ಬಿಜೆಪಿ ನಾಯಕರು ಛಲವಾದಿ ನಾರಾಯಣಸ್ವಾಮಿ, ರವಿಕುಮಾರ ಅವರನ್ನು ಮುಂದಿಟ್ಟುಕೊಂಡು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಕೀಳುಮಟ್ಟದ ಭಾಷೆಯ ಮೂಲಕ ಹಿಂದುಳಿದ ಸಮುದಾಯಗಳನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ದಸಂಸ (ಡಿ.ಜಿ.ಸಾಗರ ಬಣ) ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ವಿಧಾನ ಪರಿಷತ್‌ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ ಮಾತನಾಡಿ, “ರಾಜ್ಯ ರಾಜಕಾರಣದಲ್ಲಿ ಸಂವಿಧಾನ ಬದ್ಧ ಆಡಳಿತ ನಡೆಸಿ ಹಿಂದುಳಿದ, ದಲಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ತುಳಿಯುವ ಪ್ರಯತ್ನ ಮಾಡುತ್ತಿದೆ. ಅದರಲ್ಲೂ ದಲಿತ ನಾಯಕರನ್ನೇ ಬಳಸಿಕೊಂಡು ಇಲ್ಲಸಲ್ಲದ ಆರೋಪ, ಅವಹೇಳನಗಳನ್ನು ಮಾಡುತ್ತಿದ್ದು, ಅಧಿಕಾರದ ಆಸೆಗಾಗಿ ಕಿಳುಮಟ್ಟದ ರಾಜಕಾರಣ ಮಾಡುತ್ತಿರುವುದನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.

ಇತ್ತೀಚಿಗೆ ಕಲಬುರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ನಡೆದ ಪ್ರತಿಭಟನೆ ರ್ಯಾಲಿಯಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದವರಂತೆ ಕಾಣುತ್ತದೆಂದು ಅಗೌರವದಿಂದ ಅಸಂವಿಧಾನ ಪದವನ್ನು ಬಳಿಸಿದ್ದರು. ಈ ಮೂಲಕ ಜನರ ಹಾಗೂ ಐ.ಎ.ಎಸ್ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ ಹೇಳಿಕೆಯನ್ನು ನಾಗರಿಕ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಕಲಬುರಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆ. ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆ ಯಾಚಿಸುವಂತೆ ಹೈಕೋರ್ಟ್ ತಾಕೀತು ಮಾಡಿದೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದು, ಇಂಥ ನಡವಳಿಕೆ ಸರಿಯಲ್ಲ, ಈ ಕೂಡಲೇ ಇವರನ್ನು ಎಂ.ಎಲ್.ಸಿ ಸ್ಥಾನದಿಂದ ವಜಾಗೊಳಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಈ ಸಂದರ್ಭದಲ್ಲಿ ಜಿಲ್ಲಾ ಸಹ ಸಂಚಾಲಕ ರಮೇಶ ದರಣಾಕರ, ದಲಿತ ಮುಖಂಡ ಮಹಾಂತೇಶ ಸಾಸಬಾಳ, ವಿಜಯಕುಮಾರ ಕಾಂಬಳೆ, ರಾಜಕುಮಾರ ಕಳ್ಳಿಮನಿ, ಅರುಣ ಗವಾರಿ, ರಾಜು ಕಾಂಬಳೆ, ಶೇಖರ ಮಲಕಣ್ಣವರ, ಪ್ರಶಾಂತ ಝಂಡೆ, ಬಾಬು ಗುಡಮಿ, ಶಿವು ಮಸಳಿಕೇರಿ, ರಮೇಶ ನಿಂಬಾಳಕರ, ಧರೆಪ್ಪ ಮಂದೊಲಿ, ವಿಶ್ವನಾಥ ದೊಡಮನಿ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...