ವಿಜಯಪುರ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ

Date:

ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿ ಹಾಗೂ ಡಿವಿಪಿ ಜಿಲ್ಲಾ ಸಮಿತಿಯು ಆಗ್ರಹಿಸಿದೆ.

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿ ಮಾಡಿದಅವರು, ವಿಡಿಯೋಗಳಿರುವ ಪೆನ್ ಡ್ರೈವ್‌ಗಳು ಹಾಸನದ ಹಾದಿ ಬೀದಿಗಳಲ್ಲಿ ಚೆಲ್ಲಲಾಗಿದೆ. ಈ ಆಘಾತಕಾರಿ ಸಂಗತಿಯನ್ನು ಇಡೀ ರಾಜ್ಯವೇ ಖಂಡಿಸುತ್ತಿದೆ. ಈ ಘಟನೆಯ ಕುರಿತು ರಾಜ್ಯ ಸರ್ಕಾರವು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು, ಈ ಭೀಕರ ಘಟನೆಯಲ್ಲಿ ತೊಡಗಿದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಕೂಡಲೇ ಬಂಧಿಸಬೇಕು ಎಂದರು.

ಮನವಿ ಸಲ್ಲಿಸಿ, ಮಾತನಾಡಿದ ದವಿಪ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, ಅಮಾನುಷ ಲೈಂಗಿಕ ದೌರ್ಜನ್ಯಕ್ಕೆ ಬಲಿಯಾದ ಸಂತ್ರಸ್ತ ನೂರಾರು ಹೆಣ್ಣುಮಕ್ಕಳಿಗೆ ರಕ್ಷಣೆ ಹಾಗೂ ಆರೈಕೆ ಮಾಡುವುದು ಜರೂರಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಹೆಣ್ಣು ಮಕ್ಕಳು ಆತ್ಮಹತ್ಯೆಯಂತಹ ಘೋರ ಮಾರ್ಗ ಹಿಡಿದಿರುವ ವರದಿಗಳು ಬಂದಿವೆ. ಸರ್ಕಾರವು ಕೂಡಲೇ ಈ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಹಾಗೂ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಪರಿಷತ್  ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದು ಹೇಳಿದರು.

ದಲಿತ ವಿದ್ಯಾರ್ಥಿ ಪರಿಷತ್  ರಾಜ್ಯ ಸಂಚಾಲಕ ಬಾಲಾಜಿ ಎಂ. ಕಾಂಬಳೆ, ನಾಡಿನ ವಿದ್ಯಾರ್ಥಿ ಯುವಜನರು ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಶಿಕ್ಷಣ, ಉದ್ಯೋಗವನ್ನು ಕಲ್ಪಿಸಿಕೊಡುವ ಮತ್ತು ಮಹಿಳೆಯರಿಗೆ ರಕ್ಷಣೆ ಜೊತೆಗೆ ಗೌರವದಿಂದ ಕಾಣುವ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಸಭ್ಯ ಅಭ್ಯರ್ಥಿಗಳಿಗೆ ತಮ್ಮ ಜನಪ್ರತಿನಿಧಿಯಾಗಿ ಆಯ್ಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿ ಯುವಜನರಲ್ಲಿ ಮನವಿ ಮಾಡಿದರು.

ಈ ವೇಳೆ ಹಲವು ಪರಿಷತ್ ಮುಖಂಡರು, ದಲಿತ ಸಂಘಟನೆ ಮುಖಂಡರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...