ವಿಜಯಪುರ | ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಡಿಸಿ ಸೂಚನೆ

Date:

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಾದ ಅತಿಹೆಚ್ಚು ಮಳೆ ಪ್ರದೇಶಗಳ ಪೈಕಿ ವಿಜಯಪುರ ಜಿಲ್ಲೆಯಾಗಿದೆ. ಹಾಗಾಗಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಅಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮೂಲ ಸೌಕರ್ಯಗಳಾದ ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಪ್ರಥಮ ಆದ್ಯತೆ ನೀಡಿ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು” ಎಂದರು.

“ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಹಾನಿಗೀಡಾದವರಿಗೆ ಮೂಲಸೌಕರ್ಯ ಒದಗಿಸಲು ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರವಾಹದಿಂದ ತೊಂದರೆಗೊಳಗಾದ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಅಂದಾಜು 2.45 ಲಕ್ಷ ಹೆಕ್ಟೇರ್‌ ಬೆಳೆಹಾನಿ ಅಂದಾಜಿಸಲಾಗಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮೀಕ್ಷೆ ಕೈಗೊಂಡು ನಿಖರವಾದ ಬೆಳೆ ಹಾನಿಯ ಮಾಹಿತಿ ನೀಡಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ; ಕೋಟ್ಯಂತರ ರೂ. ನಷ್ಟ

ಜಿಲ್ಲೆಯ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ನಗರಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಕಾರ್ಯ ಕೈಗೊಂಡು 30ಕ್ಕೂ ಹೆಚ್ಚು ಪ್ರತಿಶತ ಹಾನಿಗೊಳಗಾದ ಮನೆಗಳನ್ನು ಗುರುತಿಸಿ, ಜಿಪಿಎಸ್ ಫೋಟೋ ಸಹಿತ ನಿಖರವಾದ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು.

ಹಾನಿಗೀಡಾದ ಕಟ್ಟಡಗಳ ಸಮೀಕ್ಷೆ ಕಾರ್ಯ ಕೈಗೊಂಡು ಜಿಪಿಎಸ್ ಫೋಟೋ ಸಮೇತ ವರದಿ ಸಲ್ಲಿಸಬೇಕು. ಚೆಕ್ ಡ್ಯಾಮ್ ಗಳ ಸಣ್ಣ ಸಣ್ಣ ಬಾಂಧಾರಗಳು, ಕೆರೆ ಕಟ್ಟೆಗಳ ದುರಸ್ತಿಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...