ವಿಜಯಪುರ | ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ; ಅಧಿಕಾರಿಗಳ ಲಿಖಿತ ಭರವಸೆ

Date:

ಚಿಮ್ಮಲಗಿ ಏತ ನೀರಾವರಿ ಯೋಜನೆಯ ಅಮರೇಶ್ವರ ದೇವಸ್ಥಾನದ ಬಳಿ ಮುಖ್ಯರಸ್ತೆ ತಿರುವಿನಲ್ಲಿ ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯ ಘಟಕದಿಂದ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮಣಿದ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹೋರಾಟ ಕೈಬಿಟ್ಟಿದ್ದಾರೆ.

ಶಿವಾನಂದ್ ವಾಲಿ ನೇತತ್ವದಲ್ಲಿ ಕಳೆದ ಮೂರು ದಿನಗಳಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ನಲತಾವಾಡದಲ್ಲಿ ರೈತರು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು.

ಕೆಬಿಜೆಎನ್ಎಲ್ ಅಧಿಕಾರಿಗಳು ನಿರಂತರವಾಗಿ ಹೋರಾಟಗಾರರ ಮನವೊಲಿಸಲು ಪ್ರಯತ್ನಿಸಿದರು. ಆದರೂ ಸಫಲರಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಭೂಸ್ವಾಧೀನಾಧಿಕಾರಿಗಳು ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳು ಜಂಟಿಯಾಗಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮರೇಶ್ವರ ದೇವಸ್ಥಾನದ ಹತ್ತಿರ ಬಾಕಿ ಉಳಿದಿರುವ ಕಾಮಗಾರಿ ಪ್ರಾರಂಭಿಸಲು ಎಷ್ಟು ಕಾಲಾವಕಾಶ ಬೇಕು ಮತ್ತು ಜಮೀನು ಕಳೆದುಕೊಂಡ ರೈತರಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡಲು ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕು. ಒಂದು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆಯಿಂದ ಉಳಿದ ರೈತರಿಗೆ ಕೂಡಲೇ ಆರ್ಡರ್‌ ಕಾಪಿ ನೀಡಬೇಕೆಂದು ರೈತರು ಬಿಗಿಪಟ್ಟು ಹಿಡಿದ ಕಾರಣ ಅಧಿಕಾರಿಗಳು ಎಲ್ಲ ಶರತ್ತುಗಳನ್ನು ಒಪ್ಪಿ ಲಿಖಿತವಾಗಿ ಭರವಸೆ ನೀಡಿದ್ದಾರೆ.

ಅಧಿಕಾರಿಗಳು ಲಿಖಿತವಾಗಿ ಭರವಸೆ ನೀಡಿದಾಗ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್ ನಾಡಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸದಸ್ಯ ಪೃಥ್ವಿರಾಜ್ ನಾಡಗೌಡ, ಗುರುಪ್ರಸಾದ್ ದೇಶಮುಖ್, ಸಿ ಬಿ ಅಸ್ಕಿ, ವೈ ಎಚ್ ವಿಜಯಕರ, ಅಪ್ಪು ದಣಿ ದೇಶಮುಖ, ಚಂದ್ರಶೇಖರ್ ಗಂಗನಗೌಡರ, ಸಿದ್ದಣ್ಣ ಆಲಕೊಪ್ಪರ, ಮಲ್ಲು ತಳವಾರ, ಹನುಮಂತ ಕುರಿ ನೇತೃತ್ವದಲ್ಲಿ ಹೋರಾಟ ಅಂತ್ಯಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ: ಡಾ ಬಾಬು ಸಜ್ಜನ

ಮುಖಂಡರಾದ ಜಿ ಮಹಾಂತಗೌಡ ಗಂಗನಗೌಡರ, ಬಾಬು ಆದಿಮನಿ, ರಫೀಕ್ ತಗ್ಗಿನಮನಿ, ಮಹಾಂತಯ್ಯ ಮನೆದಾಳಮಠ, ಸಂಗು ಗಂಗನಗೌಡರ, ಮಲ್ಲು ಗಂಗನವಿಜಯಗೌಡರ, ಶರಣಪ್ಪ ಗಂಗನಗೌಡರ, ಚೆನ್ನಪ್ಪ ಗೌಡ ಹಂಪನಗೌಡರ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...