ವಿಜಯಪುರ | ಸರ್ಕಾರಿ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಲು ಆಗ್ರಹ

Date:

ರಾಜ್ಯದ ಎಲ್ಲ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ ಜಾಧವ ಮಾತನಾಡಿ, ರಾಜ್ಯ ಸರ್ಕಾರದ ಇಲಾಖಾ ಅಧಿಕಾರಿಗಳು ಅವರ ಅಧೀನದ ಅಧಿಕಾರಿಗಳ ಹಾಗೂ ನೌಕರರ ಆಸ್ತಿ ವಿವರಗಳನ್ನು ನೀಡಲು ವಿನಾಕಾರಣ ವಿಳಂಬ ಮಾಡುತ್ತಿರುವುದು ಮತ್ತು ಅಕ್ರಮ ಅಸ್ತಿ ಗಳಿಸಿರುವ ನೌಕರರ ವಿರುದ್ಧ ತನಿಖೆಯ ದಾರಿ ತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣ ಆಗುತ್ತಿರುವುದರಿಂದ ಕರ್ನಾಟಕ ಲೋಕಾಯುಕ್ತ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪರಿಹಾರೋಪಾಯವನ್ನು ಸೂಚಿಸಿರುತ್ತಾರೆ. ಈ ವಿಚಾರವಾಗಿ ಅವರು ಎಲ್ಲ ಸರ್ಕಾರಿ ನೌಕರರ ಆಸ್ತಿ ವಿವರವನ್ನು ಕಡ್ಡಾಯವಾಗಿ ಪ್ರತಿವರ್ಷ ಸಂಗ್ರಹಿಸಿ, ಆ ವಿವರಗಳನ್ನು ಪೋರ್ಟಲ್‌ನಲ್ಲಿ ಆಪ್ ಲೋಡ್ ಮಾಡಿ, ಆ ವಿವರಗಳು ನಿರಂತರವಾಗಿ ಲೋಕಾಯುಕ್ತ ಸಂಸ್ಥೆಗೆ ಮುಕ್ತವಾಗಿ ಲಭ್ಯವಾಗುವ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ಸಮಿತಿಯ ಕಾರ್ಯದರ್ಶಿ ಶಿವಾನಂದ ಎಡಹಳ್ಳಿ ಮಾತನಾಡಿ, ತಮಿಳುನಾಡು ಸರ್ಕಾರದಂತೆ ಕರ್ನಾಟಕದಲ್ಲಿಯೂ ನೌಕರರ ಆಸ್ತಿ ಮತ್ತು ಸರ್ವಿಸ್ ರೆಕಾರ್ಡ್ ವಿವರಗಳನ್ನು ಮಾಹಿತಿ ಹಕ್ಕಿನಡಿ ನೀಡಲು ನಿರಾಕರಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನೌಕರರು ತಮ್ಮ ಆಸ್ತಿ ವಿವರಗಳನ್ನು ಲೋಕಪಾಲರಿಗೆ ಸಲ್ಲಿಸುತ್ತಿರಬೇಕಾದರೆ ಅದೇ ರೀತಿ ರಾಜ್ಯ ಸರ್ಕಾರದ ನೌಕರರ ವಿವರಗಳನ್ನು ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತೆ ಮಾಡುವುದಕ್ಕೆ ಯಾವುದೇ ವಿರೋಧವಿರಬಾರದು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಎಸ್‌ಡಿಪಿಐ ನೂತನ ಜಿಲ್ಲಾಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಆಯ್ಕೆ

ಈ ಸಂದರ್ಭದಲ್ಲಿ ಮುಖಂಡರಾದ ಲಕ್ಷ್ಮಣ ಚಡಚಣ, ದುರ್ಗಪ್ಪ ಬೂದಿಹಾಳ, ವಿಕ್ರಮ ವಾಘಮೋರೆ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಮತ್ತಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...