ವಿಜಯಪುರ | ಖಾಸಗಿ ಶಾಲಾ ಮಕ್ಕಳಿಗೂ ಸರ್ಕಾರದ ಸೌಲಭ್ಯ ನೀಡಲು ಆಗ್ರಹ

Date:

ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುವ ಉಚಿತ ಹಾಲು, ಪುಸ್ತಕ, ಸಮವಸ್ತ್ರ, ಬಿಸಿಯೂಟ ಇತ್ಯಾದಿ ಸೌಲಭ್ಯಗಳನ್ನು ಖಾಸಗಿ ಮಕ್ಕಳಿಗೂ ನೀಡಬೇಕೆಂದು ವಿಜಯಪುರ ಜಿಲ್ಲಾ ಅನುದಾನ ರಹಿತ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಆಗ್ರಹಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಖಾಸಗಿ ಶಾಲಾ ಮಕ್ಕಳಿಗೆ ಪಡೆಯಲು ಅವಕಾಶ ಕಲ್ಪಿಸಬೇಕು. 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣ ಇಂಗ್ಲಿಷ್ ಮಾಧ್ಯಮ ಮಾಡುವುದಾದರೆ; ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ನೆರೆಯ ಮಹಾರಾಷ್ಟ್ರ ಸರ್ಕಾರದ ರೀತಿ ಅನುದಾನ ನೀಡಬೇಕು. ಸರ್ಕಾರಿ ಅಧಿಕಾರಿಗಳು ವಿನಾಕಾರಣ ತೊಂದರೆ ಕೊಡುವುದನ್ನು ತಪ್ಪಿಸಬೇಕು. ನವೀಕರಣ ಸರಳೀಕರಿಸಿ ಶೀಘ್ರದಲ್ಲೇ ಮಾನ್ಯತೆ ನವೀಕರಣ ನೀಡಬೇಕು” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಅಸಂಘಟಿತ ಕಾರ್ಮಿಕರಿಗೆ ₹36,000ಗಳ ಕನಿಷ್ಠ ವೇತನಕ್ಕೆ CITU ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಲು 33 ಅಂಕಗಳನ್ನು ನಿಗದಿಪಡಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹ. ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಹೆಸರಿನಲ್ಲಿ ಕೆಲವು ಜನ ಶಾಲಾ ಆಡಳಿತಕ್ಕೆ ಹಾಗೂ ಶಿಕ್ಷಕರಿಗೆ ಮೋಸ ಮಾಡುವ ಪ್ರಸಂಗ ನಡೆದಿರುವುದು ಖಂಡನೀಯ. ಖಾಸಗಿ ಶಾಲೆಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನುದಾನ ರಹಿತ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಸಂಘದಿಂದ ಬೆಂಗಳೂರಿನಲ್ಲಿ ನವೆಂಬರ್ 14 ಮತ್ತು 15 ರಂದು ಸಭೆ ಕರೆಯಲಾಗಿದೆ. ಈ ನಿಟ್ಟಿನಲ್ಲಿ ಎರಡು ದಿನಗಳ ಚರ್ಚಿಸಿ ನಂತರ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಮನವಿ ಸಲ್ಲಿಸಲಾಗುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...