ವಿಜಯಪುರ | ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯ ಅಗತ್ಯ: ಪ್ರೊ.ಓಂಕಾರ ಕಾಕಡೆ

Date:

ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯಗಳನ್ನು ಸಂಪೂರ್ಣವಾಗಿ ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಟೆಲಿವಿಷನ್ ಸ್ಟುಡಿಯೋ ಭೇಟಿ ಮತ್ತು ಟೆಲಿವಿಷನ್ ಕಾರ್ಯಕ್ರಮ ನಿರೂಪಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಕ್ಷಣ ಕೆಲಸ ಸಿಗುವ ಕ್ಷೇತ್ರ ಈಗ ಮಾಧ್ಯಮ ಕ್ಷೇತ್ರವಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಅವಕಾಶಗಳು ನಿಮ್ಮ ಮುಂದೆ ಇವೆ. ಈ ಮಾಧ್ಯಮ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಮಾತ್ರ ಸುಲಭವಾಗಿ ನೀವು ವೃತ್ತಿ ಬದುಕನ್ನು ರೂಪಿಸಿಕೊಳ್ಳಬಹುದು. ನಿಮ್ಮ ಸಾಮರ್ಥ್ಯ ಮತ್ತು ಕೌಶಲ್ಯದಿಂದ ಮಾತ್ರ ಉತ್ತಮ ಟಿವಿ ಆಂಕರ್ ಆಗಲು ಸಾಧ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿವಿ ಆಂಕರ್ ಆಗಲು ಕೇವಲ ಉತ್ಸಾಹವಷ್ಟೇ ಸಾಲದು, ಸರಿಯಾದ ತರಬೇತಿ, ಶುದ್ಧ ಭಾಷೆ, ಆತ್ಮವಿಶ್ವಾಸ, ಮತ್ತು ಅಚ್ಚುಕಟ್ಟಾದ ಕೌಶಲ್ಯಗಳ ಅಗತ್ಯವಿದೆ. ಈ ತರಹದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರಗಳು ನಿಜವಾಗಿಯೂ ಮಹತ್ವದ ಸಾಧನೆಗೆ ನೆರವಾಗುತ್ತವೆ ಎಂದರು.

ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಚೆಲಿವಿಷನ್ ಮಾಧ್ಯಮದಲ್ಲಿ ಸುದ್ದಿ ಓದುವ ಕಲೆಯನ್ನು ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವಾರು ಪದವಿ ಕಾಲೇಜಿನ ಬಿ.ಎ, ಬಿ.ಕಾಂ, ಬಿಎಸ್ಸಿ, ಬಿಸಿಎ, ಬಿಬಿಎಂ ಮುಂತಾದ ಕೋರ್ಸ್‌ಸಿನ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿದ್ದಿರಾ?

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾತಿಸಿದರು. ಸಂಶೋಧನಾ ವಿದ್ಯಾರ್ಥಿನಿ ಸುಷ್ಮಾ ಪವಾರ ನಿರೂಪಿಸಿದರು. ಫಿಲೋಮಿನಾ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...