ವಿಜಯಪುರ | ವಿಶೇಷಚೇತನರಿಗೆ ವೀಲ್‌ಚೇರ್, ಇತರೆ ಸಲಕರಣೆಗಳ ವಿತರಣೆ

Date:

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ಬೆಂಗಳೂರಿನ ಆಸ್ಟರ್ ಡಿಎಂ ಫೌಂಡೇಷನ್ ಸಹಯೋಗದೊಂದಿಗೆ ವಿಶೇಷಚೇತನರಿಗೆ ವೀಲ್‌ಚೇರ್ ಹಾಗೂ ಇತರೆ ಸಲಕರಣೆಗಳ ವಿತರಣೆ ಕಾರ್ಯಕ್ರಮ ನಡೆಯಿತು.

ವಿಜಯಪುರ ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನವಚೇತನ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಆಸ್ಟರ್ ಡಿಎಂ ಫೌಂಡೇಷನ್ ಮುಖ್ಯಸ್ಥ ರೋಹನ ಪ್ರಾಂಕೊ ಮಾತನಾಡಿ, “ಸಮಾಜದಲ್ಲಿರುವ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ನ್ಯೂನ್ಯತೆ, ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಎಲ್ಲ ಸಮಸ್ಯೆಗಳನ್ನು ಮೆಟ್ಟಿನಿಂತು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಉತ್ತಮ ಬದುಕು ಕಟ್ಟಿಕೊಳ್ಳಲು ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮತ್ತು ಇತರೆ ಸಂಸ್ಥೆಗಳು ಮಾಡುತ್ತಿವೆ” ಎಂದು ಹೇಳಿದರು.

ಕಾರ್ಯಕ್ರಮದ ಇನ್ನೋರ್ವ ಅಥಿತಿ, ಅಸ್ಟರ್ ಡಿಎಂ ಫೌಂಡೇಷನ್ ಮಕ್ಕಳ ವೈದ್ಯಕೀಯ ತಜ್ಞ ಡಾ. ಚೇತನ್‌ ಮಾತನಾಡಿ, “ವಿಶೇಷ ಚೇತನರು ಹಲವಾರು ರಂಗಗಳಲ್ಲಿ ಸಾಧನೆ ಮಾಡಿರುವವರನ್ನು ನಾವು ನೋಡುತ್ತಿದ್ದೇವೆ. ಕ್ರೀಡೆ, ಕಲೆ, ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಸಾದನೆಗಳನ್ನು ಮಾಡಿದ್ದಾರೆ. ಸರ್ಕಾರವೂ ಕೂಡಾ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಸದುಪಯೋಗ ಮಾಡಿಕೊಂಡು ಮುಂದೆ ಸಾಗಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕುಡಿದ ಮತ್ತಿನಲ್ಲಿ ವ್ಯಕ್ತಿಯ ಕೊಲೆ; 6 ತಾಸಿನಲ್ಲಿ ಆರೋಪಿಗಳ ಪತ್ತೆಹಚ್ಚುವಲ್ಲಿ ತನಿಖಾ ತಂಡ ಯಶಸ್ವಿ

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾ. ಟಿಯೋಲ್ ಮಚಾದೋ ಮಾತನಾಡಿ, “ವಿಶೇಷಚೇತನರನ್ನು ಅನುಕಂಪದ ದೃಷ್ಟಿಯಿಂದ ನೋಡುತ್ತಿಲ್ಲ. ಅವರು ಸ್ವಾವಲಂಬಿಗಳಾಗಿ ಬದುಕಲು ಅವಕಾಶಗಳನ್ನು ಮಾಡಿಕೊಡಲಾಗುತ್ತಿದೆ. ಇವತ್ತು ವಿಶೇಷವಾಗಿ ಸಲಕರಣೆಗಳನ್ನು ವಿತರಿಸಲಾಗಿದೆ. ಇನ್ನು ಮನೆಯಿಂದ ಒಂದು ಹೆಜ್ಜೆ ಮುಂದೆ ಬಂದು ಸ್ವ-ಉದ್ಯೋಗ ಮಾಡಲು ಅಥವಾ ತಮ್ಮ ಯಾವುದೇ ಆಗತ್ಯತೆಗಳನ್ನು ಪೂರೈಸಿಕೊಳ್ಳಲು ಅನುಕೂಲವಾಗುತ್ತದೆ. ನೀವೂ ಕೂಡ ಸ್ವಾವಲಂಬಿಗಳಾಗಿ ಯಾರಿಗೂ ಹೊರೆಯಾಗದಂತೆ ಜೀವನ ನಡೆಸಬೇಕು” ಎಂದು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ಮಂದಿ ವಿಶೇಷಚೇತನರು ಭಾಗಿಯಾಗಿ ಸಲಕರಣೆ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...