ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧನೆ; ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಪ್ರಶಂಸನಾ ಪತ್ರ

Date:

ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ವಿಜಯಪುರ ಜಿಲ್ಲೆ ಶೇ.100ರಷ್ಟು ರಾಷ್ಟ್ರ ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಪ್ರಶಂಸನಾ ಪತ್ರ ಲಭಿಸಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಪ್ರಸಂಶನ ಪತ್ರ ನೀಡುವಂತೆ ಸೂಚಿಸಲಾಗಿತ್ತು.

“ಜಿಲ್ಲೆಯು ಉತ್ತಮ ಪ್ರಗತಿಯನ್ನು ಸಾಧಿಸಲು ಇಲಾಖಾಧಿಕಾರಿಗಳು, ಇಲಾಖೆಯ ಎಲ್ಲ ಸಿಬ್ಬಂದಿಗಳ ಅಚಲವಾದ ಬದ್ಧತೆ, ನಿರಂತರ ಶ್ರಮ, ಸಮನ್ವಯದ ಕಾರ್ಯ, ತಂಡದ ಈ ಉತ್ಸಾಹ ಹಾಗೂ ಕಠಿಣ ಪರಿಶ್ರಮವೇ ಇಂತಹ ಯಶಸ್ವಿಗೆ ನಾಂದಿಯಾಗಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಸಂಸನಾ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭವಿಷ್ಯದಲ್ಲಿಯೂ ಇಂತಹ ಉತ್ಸಾಹದಿಂದ ಕಾರ್ಯನಿರ್ವಹಣೆಯನ್ನು ನಿರೀಕ್ಷಿಸಲಾಗುತ್ತದೆ. ಪ್ರಗತಿ ಪಥದಲ್ಲಿ ಜಿಲ್ಲೆಯ ಸಾಧನೆ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಿದೆ” ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಎಂದು ಹೇಳಿದ್ದಾರೆ.

ಈ ವಿಶೇಷ ಸಾಧನೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಯ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಕೃಷ್ಣ, ಭೀಮಾ ಮತ್ತು ದೋಣಿ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಜಿಲ್ಲೆಯ ನದಿ ಪಾತ್ರಗಳಲ್ಲಿನ ಗ್ರಾಮದ ಜನರು ಅಗತ್ಯ ಪ್ರವಾಹ ಪರಿಸ್ಥಿತಿ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇದನ್ನೂ ಓದಿದ್ದೀರಾ? ದಾವಣಗೆರೆ | ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯಂತಹ ಸಮಸ್ಯೆಗೆ ವಚನ ಸಾಹಿತ್ಯ ಪರಿಹಾರ

ನದಿ ಪಾತ್ರದಲ್ಲಿ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಬಟ್ಟೆ, ಪಾತ್ರೆಗಳನ್ನು ತೊಳೆಯಲು, ಅನಾವಶ್ಯಕವಾಗಿ ನದಿ ಪಾತ್ರಕ್ಕೆ ತೆರಳುವುದು, ನದಿಯಲ್ಲಿ ಈಜುವುದು, ಮೀನು ಹಿಡಿಯುವುದನ್ನು ಮಾಡಬಾರದು” ಎಂದು ಹೇಳಿದ್ದಾರೆ.

“ಪ್ರವಾಹ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ಮಾಹಿತಿಗಳ ಬಗ್ಗೆ ಸಾರ್ವಜನಿಕರು ನಿಗಾವಹಿಸಬೇಕು. ರೈತರು ನದಿಗಳಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳನ್ನು ತೆರವುಗೊಳಿಸಬೇಕು. ರೈತರು ರಾತ್ರಿ ಸಮಯದಲ್ಲಿ ತಮ್ಮ ಜಮೀನಿನ ಬೆಳೆಗಳಿಗೆ ನೀರು ಹರಿಸಲು ಹೋಗುವಾಗ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಜಿಲ್ಲಾ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸಬಹುದಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...