ವಿಜಯಪುರ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

Date:

ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಕುರಿತು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ವಿಜೇತರಿಗೆ ಪ್ರಥಮ ₹3 ಸಾವಿರ, ದ್ವಿತೀಯ ₹2 ಸಾವಿರ ಮತ್ತು ತೃತೀಯ ಸ್ಥಾನಕ್ಕೆ ₹1 ಸಾವಿರ ರೂಗಳ ನಗದು ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗದಲ್ಲಿ ಸ್ವಚ್ಛತೆ ಕುರಿತು ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಹಾಗೂ ಗಾಂಧೀಜಿಯವ ಸ್ವಾತಂತ್ರ್ಯದ ಕನಸು… ಈ ಮೂರು ವಿಷಯಗಳ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ: ಅಸ್ಪೃಶ್ಯತ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, ಇಂದಿನ ಸಮಾಜದಲ್ಲಿ ಸರ್ವೋದಯ ಮತ ಅಂತ್ಯೋದಯದ ಪ್ರಾಸಂಗಿಕತ ಹಾಗೂ ಬದಲಾವಣೆ ನನ್ನಿಂದಲೆ ಆರಂಭ – ಗಾಂಧೀಜಿಯವರ ಪಾಠ ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಆಯಾ ವಿಭಾಗದ ಪ್ರಥಮ ಬಹುಮಾನ ಪಡೆಯುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆಗಾಗಿ ಕಳಿಸಲಾಗುವುದು.

ಇದನ್ನೂ ಓದಿ: ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

ಜಿಲ್ಲೆಯ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ, ಎಲ್ಲ ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ಪದವಿ ವಿದ್ಯಾರ್ಥಿ-ಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾ-ಲಯದ ಕುಲಸಚಿವರು ಪ್ರಬಂಧ ಸ್ವ-ರ್ಧೆಗಳನ್ನು ಆಯೋಜಿಸಿ, ಅತ್ಯುತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಿ ಸೆ.12 ರೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ವಿಜಯಪುರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...