ವಿಜಯಪುರ | ಶೀಘ್ರದಲ್ಲೇ ಬಾಬಾನಗರ ಜಲಸಂಗ್ರಹಗಾರದ ಡಿಪಿಆರ್‌ ಸಲ್ಲಿಕೆ: ಸಚಿವ ಎಂ ಬಿ ಪಾಟೀಲ

Date:

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಬಾಬಾನಗರದ ಬಳಿ ನಿರ್ಮಿಸಲು ಉದ್ದೇಶಿರುವ 0.8 ಟಿಎಂಸಿ ಜಲಸಂಗ್ರಹಗಾರದ ಬಗ್ಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್)ಯನ್ನು ಶೀಘ್ರದಲ್ಲಿಯೇ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

ಬಾಬಾನಗರ ಹತ್ತಿರವಿರುವ ಉದ್ದೇಶಿತ ಯೋಜನಾ ಪ್ರದೇಶಕ್ಕೆ ಅಧಿಕಾರಿಗಳು, ರೈತ ಮುಖಂಡರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

“ಜಲಸಂಗ್ರಹಗಾರ ನಿರ್ಮಾಣಕ್ಕೆ ಎಲ್ಲರ ಸಲಹೆ ಸೂಚನೆ ಪಡೆಯಲಾಗುವುದು. ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಅವುಗಳನ್ನು ಸರಿಪಡಿಸಿಕೊಂಡು ಡಿಪಿಆರ್ ಸಿದ್ದಪಡಿಸಲಾಗುವುದು. ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಅಡಿ ಒಟ್ಟು 6.3 ಟಿಎಂಸಿ ಹಂಚಿಕೆಯಾಗಿದೆ. ಈ ಪೈಕಿ ತಿಕೋಟಾ ಹೋಬಳಿಗೆ 5.5 ಟಿಎಂಸಿ ನೀರು ಲಭ್ಯವಾಗಿದ್ದರೂ ಮಳೆಗಾಲದಲ್ಲಿ ಮಾತ್ರ ಬೆಳೆಗಳಿಗೆ ನೀರು ಕೊಡಲಾಗುತ್ತಿದೆ. ಜೊತೆಗೆ ಕೆರೆಗಳನ್ನು ತುಂಬಿಸಲು ನೀರು ಬಳಕೆ ಮಾಡುತ್ತಿದ್ದರೂ ಇದುವರೆಗೆ ಕೇವಲ 2 ಟಿಎಂಸಿಯಷ್ಟು ನೀರು ಮಾತ್ರ ಬಳಕೆ ಸಾಧ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಲದೆ ಈಗಾಗಲೇ ಎಫ್ಐಸಿ ಕಾಮಗಾರಿ ನಡೆಯುತ್ತಿದೆ. ಎಫ್ಐಸಿ ಆದ ನಂತರವೂ ಕೇವಲ ಮೂರು ಟಿಎಂಸಿ ನೀರು ಮಾತ್ರ ಬಳಕೆ ಆಗುತ್ತದೆ. ಇನ್ನು 2.5 ಟಿಎಂಸಿ ನೀರು ಉಳಿಕೆಯಾಗಲಿದೆ. ಹೀಗಾಗಿ ಈ ನೀರನ್ನು ಮಳೆಗಾಲದಲ್ಲಿ ಶೇಖರಿಸಿಕೊಂಡು ಸತ್ಬಳಿಕೆ ಮಾಡಲು ಉದ್ದೇಶಿಸಲಾಗಿದೆ. ತುಬಚಿ – ಬಬಲೇಶ್ವರ ಯೋಜನೆ ನೀರನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳುವ ಉದ್ದೇಶದಿಂದ ಬಾಬಾ ನಗರದ ಬಳಿ 0.8 ಟಿಎ ಸಿ ಜಲಸಂಗ್ರಹಾರ ನಿರ್ಮಾಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಈಗಾಗಲೇ ಇಲ್ಲಿ ಐದು ನೂರು ಎಕರೆಗೂ ಅಧಿಕ ಸರ್ಕಾರಿ ಜಮೀನು ಲಭ್ಯವಿದೆ. ಜಲಸಂಗ್ರಹಗಾರ ನಿರ್ಮಾಣಕ್ಕೆ ಯಾವುದೇ ಭೂ ಸ್ವಾಧೀನಕ್ಕೆ ಹಣ ವೆಚ್ಚ ಮಾಡುವ ಅವಶ್ಯಕತೆ ಇಲ್ಲ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

“ಕೇವಲ ಭೂಸ್ವಾಧೀನಕ್ಕೆ700-800 ಕೋಟಿ ರೂ ವೆಚ್ಚ ಮಾಡಬೇಕಾಗಿ ಬರುತ್ತಿತ್ತು. ಸರ್ಕಾರಿ ಜಮೀನು ಇರುವುದರಿಂದ ಈ ಹಣ ಉಳಿತಾಯವಾಗಲಿದೆ. ಜೊತೆಗೆ ಈ ಪ್ರದೇಶವು ನೈಸರ್ಗಿಕವಾಗಿ ತಗ್ಗು ಪ್ರದೇಶವಾಗಿದ್ದು, ಜಲಸಂಗ್ರಹಗಾರಕ್ಕೆ ಸೂಕ್ತವಾಗಲಿದೆ. ಹೆಚ್ಚಿನ ಕಾಮಗಾರಿ ಅವಶ್ಯಕತೆಯೂ ಬರುವುದಿಲ್ಲ. ಈ ಜಲಸಂಗ್ರಹಗಾರದ ಮೂಲಕ ಬೇಸಿಗೆ ಕಾಲದಲ್ಲಿ ಕೆರೆಗಳು, ಹಳ್ಳಿಗಳಿಗೆ ನೀರು ಒದಗಿಸಲಾಗುವುದು. ಹೀಗಾಗಿ ಇದೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೂ ಮನದಟ್ಟು ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...