ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

Date:

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್‌) ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಡಿಎಸ್‌ಎಸ್‌ ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಮಾತನಾಡಿ, “ಚಡಚಣ ತಾಲೂಕಿನ ಮರಗೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಶೌಚಾಲಯಗಳಿಗೆ ಬಾಗಿಲುಗಳಿಲ್ಲ. ಕಿಟಕಿಗಳು ಕಿತ್ತುಹೋಗಿವೆ. ಮಕ್ಕಳ ಊಟಕ್ಕೂ ಅವ್ಯವಸ್ಥೆ ಉಂಟಾಗಿದ್ದು, ಶಾಲೆಯಲ್ಲಿ ಕಲಿಕಾ ವಾತಾವರಣವೇ ಹಾಳಾಗಿ ಹೋಗಿದೆ” ಎಂದರು.

“ವಸತಿಶಾಲೆಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದರೆ ಯಾವೊಬ್ಬ ಅಧಿಕಾರಿ ಅಥವಾ ಶಾಲಾ ಸಿಬ್ಬಂದಿ ಈ ಕುರಿತಾಗಿ ತಲೆ ಕೆಡಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಸಮಸ್ಯೆಯಾಗುತ್ತಿದ್ದರೂ ಅಧಿಕಾರಿಗಳು ನೋಡಿಯೂ ನೋಡದಂತೆ ಕಣ್ಣು ಮುಚ್ಚಿಕೊಂಡು ಹೋಗುತ್ತಿದ್ದಾರೆ. ಅಂಥವರ ವಿರುದ್ಧ ಕೂಡಲೇ ಕ್ರಮ ಜರುಗಿಸಿ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಾಲಕ ಮುರಗೇಶ ಜೈನಾಪೂರ ಮಾತನಾಡಿ, “ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಿರುವುದರಿಂದ ಅಲ್ಲಿರುವ ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅತಿ ಅವಶ್ಯಕವಾಗಿದೆ. ಕಾಟಚಾರಕ್ಕೆ ಅಧಿಕಾರಿಗಳು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆಯೇ ಹೊರತು ಅವರಿಗೆ ಯಾವುದೇ ಜವಾಬ್ದಾರಿಯಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡೆಂಘೀಯಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದಲ್ಲಿ ಏರುಪೇರಾದರೆ ಯಾರು ಹೊಣೆ. ಸಧ್ಯ ಅಲ್ಲಿರುವ ವಿದ್ಯಾರ್ಥಿಗಳಿಗೆ ಡೆಂಘೀ ಹರಡಿದರೆ, ಯಾರು ಜವಾಬ್ದಾರಿ, ವಿದ್ಯಾರ್ಥಿಗಳು ಭಯದಿಂದ ಶಿಕ್ಷಣ ಪಡೆದುಕೊಳ್ಳುವಂತೆ ಮಾಡಿರುವ ಅಧಿಕಾರಿಗಳ ವಿರುದ್ಧ ಜರುಗಿಸಬೇಕು” ಎಂದು ಒತ್ತಾಯಿಸಿದರು.

“ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಅಲ್ಲಿನ ಸಮಸ್ಯೆಗೆ ಹೊಣೆಗಾರರನ್ನಾಗಿಸಬೇಕು. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಮೊರಾರ್ಜಿ ದೇಸಾಯಿ ವಸತಿಶಾಲೆಗೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಕಾರಣರಾಗುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಭೇಟಿ; ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನ ಬಳಕೆಗೆ ಸೂಚನೆ

ಈ ಸಂದರ್ಭದಲ್ಲಿ ಶ್ರೀಧರ ವಾತ್ತೊರೆ, ಯಲ್ಲಪ್ಪ ಕಾಂಬಳೆ, ಚೈತನ್ಯ ತೊರವಿ, ಸವಿತಾ ವಗ್ಗರ, ನಕುಶ ಹೊಸಮನಿ, ಸಂಗಪ್ಪ ಶೇಖರ ಮಲಕನವರ, ಸಂಗಮೇಶ ಇರಸೂರ, ಫೀಮು ಉತ್ನಾಳ, ಮಾಂತೇಶ ರಾಠೋಡ, ಶ್ರೀಮಂತ ಪವಾರ, ಸದಾಶಿವ ಕಾಂಬಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...