ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವಂತೆ ಡಿವಿಪಿ ಆಗ್ರಹ

Date:

ಶೈಕ್ಷಣಿಕ ವರ್ಷ ಆರಂಭವಾದ ಕೂಡಲೇ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ಸಂಘಟನೆಯಿಂದ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಪಂಚಾಯತ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಯುವರಾಜ್ ಓಲೇಕಾರ್ ಮಾತನಾಡಿ, “ಸರ್ಕಾರವು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ” ಎಂದು ಹೇಳಿದರು.

ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮತ್ತು ಈ ಸಮುದಾಯಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುದಾನವನ್ನು ಮೀಸಲಿಟ್ಟಿದೆ. ಆದರೆ ಈ ಅನುದಾನ ಈ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಕೇಳಿದರೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಚೇರಿಗೆ ಅಲೆದಾಡಿ ಪಾಲಕರು ಮತ್ತು ವಿದ್ಯಾರ್ಥಿಗಳ ಚಪ್ಪಲಿಗಳು ಸವೆದಿವೆಯೇ ಹೊರತು ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.25ರ ಅನುದಾನದಲ್ಲಿ ಪಠ್ಯಪುಸ್ತಕ ವಿತರಣೆ ಮಾಡುವ ಯೋಜನೆ ಇದ್ದು, ಈ ಯೋಜನೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನ ಮಾಡದೆ ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಲು ಇದೂ ಒಂದು ಕಾರಣವಾಗಿದೆ” ಎಂದರು.

“ಪಠ್ಯಪುಸ್ತಕವನ್ನು ಕೇಳಲು ಹೋದ ವಿದ್ಯಾರ್ಥಿಗಳಿಗೆ ಸಿಂದಗಿ ತಾಲೂಕಿನ ಬಂದಾಳ ಗ್ರಾಮ ಪಂಚಾಯತಿಯ ಅಧಿಕಾರಿಗಳು ಉಡಾಫೆ ಉತ್ತರವನ್ನು ನೀಡಿ ವಿದ್ಯಾರ್ಥಿಗಳನ್ನು ಅಲೆದಾಡಿಸುತ್ತಿದ್ದಾರೆ. ಹಾಗಾಗಿ ಮೇಲಾಧಿಕಾರಿಗಳಾದ ತಾವು ತಪ್ಪಿತಸ್ಥ ಅಧಿಕಾರಿಗಳ ಮೇಲೇಯೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಂಶಿ ಗ್ರಾ.ಪಂ. ಪಿಡಿಓ ಅಮಾನತ್ತಿಗೆ ಸಚಿವ ಸಂತೋಷ್ ಲಾಡ್ ಆದೇಶ

ಪ್ರತಿ ವರ್ಷ ಶೈಕ್ಷಣಿಕ ವರ್ಷ ಆರಂಭವಾದ ಜೂನ್ ಜುಲೈ ತಿಂಗಳುಗಳಲ್ಲಿ ಸಿಂದಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಕರೆಯಬೇಕು. ಈ ಕುರಿತು ಕಡ್ಡಾಯವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸೂಚನಾ ಫಲಕ ಹೊರಡಿಸಬೇಕು. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಅಥವಾ ಪಠ್ಯಪುಸ್ತಕ ವಿತರಣೆಯನ್ನು ನೀಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಸಾವಿರಾರು ವಿದ್ಯಾರ್ಥಿಗಳೊಂದಿಗೆ ತಾಲೂಕು ಪಂಚಾಯತ್‌ಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಲೋಕೇಶ್ ಚಲವಾದಿ, ಆಕಾಶ ಹೊಸಮನಿ, ಪ್ರೇಮ್ ಕುಮಾರ್ ಹೊಸಮನಿ, ಚೇತನ್, ಸುದೀಪ್ ಪೂಜಾರಿ, ಭೀಮು, ಕಾಶಿನಾಥ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...