ವಿಜಯಪುರ | ಸಮರ್ಪಕ ಬಸ್‌ ವ್ಯವಸ್ಥೆಗೆ ಡಿವಿಪಿ ಆಗ್ರಹ

Date:

ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು ಹಳ್ಳಿಯಿಂದ ಶಾಲೆ-ಕಾಲೇಜುಗಳಿಗೆ ಕಲಕೇರಿಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಸ್‌ ವ್ಯವಸ್ತೆ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಮುಖಂಡರು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ವಿಜಯಪುರ ಜಿಲ್ಲೆಯ ತಾಳಿಕೋಟೆ ಘಟಕದ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಡಿವಿಪಿ ತಾಲೂಕು ಸಂಚಾಲಕ ಕಾಶಿನಾಥ್ ತಾಳಿಕೋಟಿ, “ಆಲಗೂರ, ಹುಣಸ್ಯಾಳ ಗ್ರಾಮಗಳಿಂದ ಕಲಕೇರಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲ. ಅಲ್ಲೊಂದು ಇಲ್ಲೊಂದು ಬಸ್‌ ಇದ್ದರೂ ಸರಿಯಾದ ಸಮಯಕ್ಕೆ ಬರುವುದಿಲ್ಲ. ಇದರಿಂದ ಖಾಸಗಿ ವಾಹನಗಳಿಗೆ ತಿಂಗಳಿಗೆ ಒಂಬೈನೂರು ರೂಪಾಯಿಗಳನ್ನು ಕೊಟ್ಟು ಬರುವಂತಾಗಿದೆ. ಇದರಿಂದ ಪಾಲಕರಿಗೆ ಆರ್ಥಿಕ ಹೊರೆಯಾಗಿದೆ. ಹಾಗಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಿ ಸರಿಯಾದ ಸಮಯಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ವಿಜಯನಗರ | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ; ವಾರ್ಡನ್‌ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗಸ್ಟ್ 15ರ ಒಳಗಾಗಿ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು” ಎಂದು ದೇವರಹಿಪ್ಪರಗಿ ದಲಿತ ವಿದ್ಯಾರ್ಥಿ ಪರಿಷತ್ ಸಹಸಂಚಾಲಕ ಕಾಶಿನಾಥ್ ತಾಳಿಕೋಟೆ ಆಗ್ರಹಿಸಿದರು.

ಈ ಸಂಧರ್ಭದಲ್ಲಿ ಆಲಗೂರಿನ ಭಗತ್ ಸಿಂಗ್ ಯುವ ಸಂಘಟನೆಯ ವಲಯ ಅಧ್ಯಕ್ಷ ರವಿ ಹೊಕ್ರಾಣಿ, ಕಲಕೇರಿ ಬಸವೇಶ್ವರ ಕಾಲೇಜಿನ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾಗೂ ಸಂಘಟನೆಯ ಪದಾಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...