ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಆತಂಕ

Date:

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ‌ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಮಿಯ 2ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಮಿ ನಡುಗುವ ಅನುಭವ ಆಗುತ್ತಲೇ ಮನೆಗಳ ಗೋಡೆಗಳಿಗೆ ಹಾಕಿದ್ದ ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಚದುರಿ ಸದ್ದು ಮಾಡಿವೆ. ಇದರಿಂದಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಈ ಭಾಗದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಿರುವುದು ಜಿಲ್ಲೆಯ ಜನತೆಗೆ ಭಯಹುಟ್ಟಿಸಿದೆ. ಗುರುವಾರ ಸಂಭವಿಸಿದ ಲಘು ಭೂಕಂಪನವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢೀಕರಿಸಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಉಕುಮನಾಳ ಗ್ರಾಮದಲ್ಲಿ 2023ರ ಡಿಸೆಂಬರ್ 8ರ ಶುಕ್ರವಾರ ಬೆಳಗ್ಗೆ 6.52ಕ್ಕೆ ಭೂಂಕನಪದ ಅನುಭವವಾಗಿತ್ತು. ಅಂದುಕೂಡ ಜನರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದು ಕೆಲವು ಸಮಸಯದವರೆಗೆ ಇಲ್ಲೇ ಕಾಲಕಳೆಯುವಂತಾಗಿತ್ತು.

ಡಿಸೆಂಬರ್ 8ರ ಬೆಳಗಿನ ಜಾವ ರಿಕ್ಟರ್ ಮಾಪಕದಲ್ಲಿ 3.1ರಷ್ಟು ತೀವ್ರತೆ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ದೃಢಪಡಿಸಿದ್ದರು.

ಕಳೆದ 2ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುತ್ತಲೇ ಇದ್ದು, ಜನರು ಆತಂಕದಲ್ಲಿ ಜೀವನ ಕಳೆಯುಂತಾಗಿದೆ. ರಾತ್ರಿ, ಮಧ್ಯರಾತ್ರಿ ಸಮಯದಲ್ಲಿ ಏಕಾಏಕಿ ಶಬ್ದದೊಂದಿಗೆ ಭೂಮಿ ನಡುಗುತ್ತಿರುವುದು ಜನರು ನಿದ್ದೆಗೆಡುವಂತೆ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...