ವಿಜಯಪುರ | ಎದ್ದೇಳು ಕರ್ನಾಟಕ ಸಭೆ, ಮತದಾನ ಜಾಗೃತಿಗೆ ಕರೆ

Date:

ಎದ್ದೇಳು ಕರ್ನಾಟಕ ವಿಜಯಪುರ, ನಗರದ ನವಚೇತನ ಹಾಲ್‌ನಲ್ಲಿ ಲೋಕಸಭಾ ಚುನಾವಣೆಯ ಕುರಿತು ಸಭೆ ನಡೆಸಿದೆ. ಎದ್ದೇಳು ಕರ್ನಾಟಕದ ಅಶ್ವಿನಿ ಅವರು ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಯಾವ ತರ ಕೆಲಸ ಮಾಡಿದ್ದೇವೆಯೋ, ಅದೇ ತರ 2024ರ ಲೋಕಸಭಾ ಚುನಾವಣೆಯಲ್ಲಿ ನಾವು ಕೆಲಸ ಮಾಡಬೇಕಾದ ಅಗತ್ಯವಿದೆ ಎಂದರು.

ಮುಂದುವರಿದು, ಬಹಳ ಮುಖ್ಯವಾಗಿ ನಾವು ಮಾಡಬೇಕಾದ ಕೆಲಸವೇನೆಂದರೆ, ಪ್ರತಿ ಹಳ್ಳಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವುದು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು. ಮಹಿಳಾ ಸಂಘಗಳನ್ನು ಒಟ್ಟುಗೂಡಿಸಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈಗಿನ ಕೇಂದ್ರ ಸರ್ಕಾರ ಶಿಕ್ಷಣವನ್ನು ಕೇಸರಿಕರಣ ಮಾಡಲು ಎನ್ಇಪಿ ಜಾರಿ ಮಾಡಲು ಮುಂದಾಗುತ್ತಿದೆ. ಸಂವಿಧಾನದ ಆಶಯವನ್ನು ಮೊಟಕುಗೊಳಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ.

ಎದ್ದೇಳು ಕರ್ನಾಟಕ ಬೆಂಗಳೂರು ಮಲ್ಲಿಗೆಯವರು ಮಾತನಾಡಿ, ತಳಮಟ್ಟದಿಂದ ನಮ್ಮ ತಂಡವನ್ನು ತಯಾರು ಮಾಡಬೇಕಿದೆ. ಜಾತ್ಯತೀತ ಮಹಿಳಾ ಸಂಘಗಳು, ಹಿಂದುಳಿದ ಸಮುದಾಯದ ಯುವಕರ ಸಂಘ-ಸಂಸ್ಥೆಗಳೊಂದಿಗೆ, ನಮ್ಮ ಉದ್ದೇಶ ತಿಳಿಸಿ ನಮ್ಮ ಜೊತೆ ಕೆಲಸ ಮಾಡಲು ಪ್ರೇರೇಪಿಸಬೇಕಿದೆ. ಚುನಾವಣಾ ಅಕ್ರಮಗಳ ತಡೆಯುವ ಬಗ್ಗೆ ಜಾಗೃತಿ ಮೂಡಿಸುವುದು. ಎದ್ದೇಳು ಕರ್ನಾಟಕ ರಾಜ್ಯ ಅಲ್ಲದೆ, ದೇಶಾದ್ಯಂತ ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಆದ ಟೀಮ್ ತಯಾರಿ ಮಾಡಿ ಸಭೆ ಮಾಡಲಾಗಿದೆ. ಸಭೆಯಲ್ಲಿ 24 ರಾಜ್ಯಗಳಿಂದ ಸದಸ್ಯರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ಪಕ್ಷಾತೀತವಾಗಿ ಕೆಲಸ ಮಾಡಬೇಕಾಗಿದೆ. 1924ರಿಂದ 2024ಕ್ಕೆ ಆರ್‌ಎಸ್‌ಎಸ್‌ಗೆ ನೂರು ವರ್ಷ. ಅದಕ್ಕಾಗಿ ಅವರು ಎಲ್ಲಾ ತರಹದ ತಯಾರಿಯಲ್ಲಿ ಇದ್ದಾರೆ. ನಿಮಗೆ ಗೊತ್ತಿದೆ, ಹಿಟ್ಲರ್‌ನ ದುರಾಡಳಿತ, ಧರ್ಮ-ಧರ್ಮಗಳ ಮಧ್ಯೆ ದ್ವೇಷ, ಭಾಷಣದಿಂದ ಅಧಿಕಾರದ ಗದ್ದುಗೆಗೇರಿದ ವಿಷಯ, ಸರ್ವಾಧಿಕಾರದ ಅಡಿಯಾಳಾಗಬಾರದು. ಪ್ರಗತಿಪರರು ಸೇರಿ ಕೋಮುವಾದಿ ರಾಜಕಾರಣವನ್ನು ಸೋಲಿಸಲು ಬೂತ್ ಮಟ್ಟದ ಕಾರ್ಯಕರ್ತರಾಗಿ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದರು.

ಡಿಸೇಂಬರ್ 3ರಂದು ಜನದನಿ ಸಮಾವೇಶ ಮಾಡಲು ಸಭೆ ತೀರ್ಮಾನಿಸಿತು. ಶ್ರೀನಾಥ್ ಪೂಜಾರಿ, ಅಬ್ದುಲ್ ಖಾದಿರ್, ಮುನಸಿ, ಡಾ. ಭುವನೇಶ್ವರಿ, ಸಮೀರ್ ಇತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...