ವಿಜಯಪುರ | ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ: ಶಿಕ್ಷಣತಜ್ಞ ಎ ಎಚ್ ಸಾಗರ

Date:

ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ ಎಂದು ಶಿಕ್ಷಣತಜ್ಞ ಎ ಎಚ್ ಸಾಗರ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ ಹಾಗೂ ಅಂತರಿಕ ಗುಣಮಟ್ಟ ಭರವಸೆ ಕೋಶ ಇವರ ಸಹಯೋಗದಲ್ಲಿ ಒಂದು ದಿನದ ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಯುಗದಲ್ಲಿ ವಿದ್ಯಾರ್ಥಿಗಳಿಗೆ ತಾರ್ಕಿಕತೆ, ಸಾಫ್ಟ್‌ಸ್ಕಿಲ್‌ ಮತ್ತು ಇತರ ಅಗತ್ಯ ಕೌಶಲ್ಯಗಳು ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“21ನೇ ಶತಮಾನವು ತಂತ್ರಜ್ಞಾನ ಮತ್ತು ನವೀನತೆಯ ಕಾಲವಾಗಿದೆ. ಇತ್ತೀಚಿನ ತಂತ್ರಜ್ಞಾನವು ಡಿಜಿಟಲ್ ಪ್ರಪಂಚವನ್ನು ಇನ್ನಷ್ಟು ಬದಲಾಯಿಸುತ್ತಿದೆ. ಇಂಥದರಲ್ಲಿ, ಕಂಪ್ಯೂಟರ್ ಮತ್ತು ಬ್ರೈನ್ ಇಂಟರ್ಫೇಸ್‌ಗಳನ್ನು ಬಳಸುವ ಮೂಲಕ, ಮಾನವ ಮತ್ತು ಯಂತ್ರದ ನಡುವಿನ ಸಂವಹನವನ್ನು ಸುಲಭಗೊಳಿಸಲು ಸಾಕಷ್ಟು ಹೊಸ ಅವಕಾಶಗಳು ಬಂದಿವೆ. ಈ ಹೊಸದಾದ ಪ್ರವರ್ತನೆಗಳ ಬಗ್ಗೆ ಸಾಫ್ಟ್‌ಸ್ಕಿಲ್‌ ಸಮುದಾಯ ನಿರ್ವಹಣೆ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ಬೆಳೆಸುವುದು ಅತ್ಯಂತ ಮುಖ್ಯವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದ.ಕ | ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು; ಸಮಯ ಪ್ರಜ್ಞೆ ಮೆರೆದ ಬಸ್‌ ಚಾಲಕ, ನಿರ್ವಾಹಕ

ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಇಂದಿನ ತಂತ್ರಜ್ಞಾನದ ಯುಗದಲ್ಲಿ ಯಶಸ್ವಿಯಾಗಲು, ಕೇವಲ ವಿಷಯ ತಿಳಿದರೆ ಸಾಕಾಗುವುದಿಲ್ಲ. ಬದಲಾಗಿ ಸಮಾನಾಂತರ ಕೌಶಲ್ಯ ಒದಗಿಸುತ್ತಿರುವ ಶಿಕ್ಷಣ ಪಡೆಯುವುದು ಅತ್ಯಂತ ಅಗತ್ಯವಾಗಿದೆ” ಎಂದರು.

ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಐಕ್ಯುಎಸಿ ನಿರ್ದೇಶಕ ಪ್ರೊ ಪಿ ಜಿ ತಡಸದ ಹಾಗೂ ಡಾ ಪಾಯ್ ಹೊಸಕೇರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...