ವಿಜಯಪುರ | ಚುನಾವಣಾ ಬಾಂಡ್ ಹಗರಣ; ಮೋದಿ ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ: ಪಾಟೀಲ್ ಗಣಿಹಾರ್

Date:

ಬಿಜೆಪಿ, ಸಂಘ ಪರಿವಾರದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʼವಿಶ್ವಗುರುʼ ಎಂದು ದೊಡ್ಡದಾಗಿ ಬಿಂಬಿಸಿದ್ದರು. ಆದರೆ, ಚುನಾವಣಾ ಬಾಂಡ್ ಹಗರಣದ ಮೂಲಕ ಮೋದಿ ಅವರು ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ್ ಗಣಿಹಾರ್ ಆರೋಪಿಸಿದರು.

ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಹೆಸರಲ್ಲಿ ಬಿಜೆಪಿಯು ಇಡೀ ದೇಶದ ಇತಿಹಾಸದಲ್ಲಿ ಕಂಡು ಕೇಳರಿಯದ ಹಗರಣ ಮಾಡಿದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಅಳಿಯ ಪದ್ಧತಿಯನ್ನು ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬದಲಾಯಿಸಿ, ಕೊಡುವವರ ಹೆಸರು ಗೌಪ್ಯವಾಗಿ ಇಡಬೇಕು, ಯಾವ ಪಕ್ಷಕ್ಕೆ ಯಾರು ನೀಡಿದ್ದಾರೆ ಎಂಬುದನ್ನು ಗೌಪ್ಯವಾಗಿಡಬೇಕು ಎಂಬ ಕಾನೂನು ಜಾರಿಗೆ ತರುವ ಮೂಲಕ, ಕಾರ್ಪೊರೇಟ್ ಕಂಪನಿಗಳಿಂದ ದೊಡ್ಡ ಮಟ್ಟದಲ್ಲಿ ಅಕ್ರಮವಾಗಿ ಹಣ ದೋಚಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಬಾಂಡ್‌ ಹಗರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸಿತ್ತು. ಮಾಹಿತಿ ಕೊಡದಂತೆ ಎಸ್‌ಬಿಐ ಮೇಲೆ ಕೇಂದ್ರ ಸರ್ಕಾರ ಭಾರಿ ಒತ್ತಡ, ಪ್ರಭಾವ ಬೀರಿತ್ತು. ಆದರೆ, ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ, ಚಾಟಿ ಬೀಸಿದ ಪರಿಣಾಮ ಮೂರು ತಿಂಗಳು ಸಮಯ ಕೇಳಿದ್ದ ಎಸ್‌ಬಿಐ ಕೇಬಲ್ ಮೂರು ದಿನಗಳಲ್ಲಿ ಮಾಹಿತಿ ಕೊಟ್ಟಿದೆ ಎಂದರು.

ಚುನಾವಣಾ ಬಾಂಡ್ ಮೂಲಕ ಬಿಜೆಪಿ 13ಕೋಟಿ ಸಾವಿರ ಹಣ ಸಂಗ್ರಹಿಸಿದೆ. ಇದಲ್ಲದೆ ಅಕ್ರಮವಾಗಿ ಇನ್ನಷ್ಟು ಹಣ ಸಂಗ್ರಹ ಮಾಡಿದೆಯೋ ತಿಳಿಯದಾಗಿದೆ. ಚುನಾವಣಾ ಬಾಂಡ್ ಬಗ್ಗೆ ಪ್ರಧಾನಿ ಅವರು ಏಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ಫಾರ್ಮಾ ಕಂಪನಿಗಳು ಚುನಾವಣಾ ಬಾಂಡ್ ಖರೀದಿಸಿದ ಬಳಿಕ ದೇಶದಲ್ಲಿ ಔಷಧ ಮಾರುಕಟ್ಟೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಗೆ ಜನರ ಜೀವ ಮುಖ್ಯವಲ್ಲ, ಹಣ ಗಳಿಸುವುದೇ ಇವರಿಗೆ ಮುಖ್ಯವಾಗಿತ್ತು ಎಂಬುದು ಇದರಿಂದ ಸಾಬೀತಾಗಿದೆ ಎಂದು ದೂರಿದರು.

ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಬಿಐ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ರಾಜೀನಾಮೆ ಪಡೆದು ಮನೆಗೆ ಕಳಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ರಫೆಲ್ ಯುದ್ಧ ವಿಮಾನ ಕರೆದಿಯಲ್ಲೂ ಕೇಂದ್ರ  ಸರ್ಕಾರ ದೊಡ್ಡ ಭ್ರಷ್ಟಾಚಾರ ನಡೆಸಿ, ಮಾಹಿತಿ ಕಳೆದು ಹೋಗಿದೆ ಎಂದು ಸುಳ್ಳು ಹೇಳಿ ಹಗರಣವನ್ನು ಮುಚ್ಚಿ ಹಾಕಿದೆ. ಅದೇ ರೀತಿ, ಕೋವಿಡಿ ಸಂದರ್ಭದಲ್ಲಿ ಪಿಎಂ ಕೇರ್ ಫಂಡ್ ಹೆಸರಿನಲ್ಲೂ ದೊಡ್ಡ ಪ್ರಮಾಣದಲ್ಲಿ ಹಣ ವಸೂಲಿ ಮಾಡಲಾಗಿದೆ. ಇದರಲ್ಲಿ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂಬುದು ತಿಳಿಯದಾಗಿದೆ ಎಂದ ಅವರು, ಸುಪ್ರೀಂಕೋರ್ಟ್ ಈ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿದರು.

ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನ ಗೆಲ್ಲುತ್ತವೆ ಎನ್ನುವ ಬಿಜೆಪಿಯವರು ಪ್ರಾದೇಶಿಕ ಪಕ್ಷಗಳ ಮನೆ ಬಾಗಿಲಿಗೆ ಹೋಗಿ ಕಾಲು ಹಿಡಿಯುತ್ತಿರುವುದು ಏಕೆ? ಎಂದು ಅವರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಡಾ. ರವಿ ಬಿರಾದಾರ, ನಾಗರಾಜ್ ಲಂಬು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...