ವಿಜಯಪುರ | ಪೀರ ಗಾಲಿಬಸಾಹೇಬ ದರ್ಗಾಕ್ಕೆ ತೆರಳುವ ರುಕುಂಪುರ ರಸ್ತೆ ಅತಿಕ್ರಮಣ: ತೆರವುಗೊಳಿಸುವಂತೆ ಅನಿರ್ದಿಷ್ಟಾವಧಿ ಧರಣಿ

Date:

ಪೀರ ಗಾಲಿಬಸಾಹೇಬ ದರ್ಗಾಕ್ಕೆ ಎಲ್ಲರೂ ಭಕ್ತಿಯಿಂದ ಆರಾಧಿಸುತ್ತ ಬಂದಿದ್ದು, ಸದ್ಯ ದರ್ಗಾಕ್ಕೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ರಸ್ತೆ ಸಂಪೂರ್ಣವಾಗಿ ಅತಿಕ್ರಮಣಗೊಂಡು ಬಂದ್‌ ಆಗಿದೆ. ಅದರ ಬದಲು ಅಂಜುಮನ್‌ ಜಾಗದಲ್ಲಿ ತಾತ್ಕಾಲಿಕವಾಗಿ ಹಾದು ಹೋಗಬೇಕಾಗಿದೆ. ಅಲ್ಲಿ ಕಿರಿದಾದ ರಸ್ತೆ ಇದ್ದು, ಎರಡೂ ಬದಿಗಳಲ್ಲಿ ಮಾಂಸದ ಅಂಗಡಿಗಳಿವೆ. ಇದರಿಂದ ದರ್ಗಾಕ್ಕೆ ತೆರಳುವ ಭಕ್ತರಿಗೆ, ಮಹಿಳೆಯರಿಗೆ ಅನಾನೂಕುಲವಾಗುತ್ತಿದೆ ಎಂದು ದಲಿತ ಸಂಘಟನೆ ಮುಖಂಡ ಹರೀಶ ಯಂಟಮಾನ, ಗುತ್ತಿಗೆದಾರ ಮೈಬೂಬ ಮಸಳಿ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಸಂತ ಪೀರ ಗಾಲಿಬಸಾಹೇಬ ದರ್ಗಾಕ್ಕೆ ತೆರಳುವ ರುಕುಂಪುರ ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಡೆಯುತ್ತಿರುವ 4ನೇ ದಿನದ ಧರಣಿ ಸತ್ಯಾಗ್ರದಲ್ಲಿ ಮಾತನಾಡಿದರು.

ತಾಪಂ ಮಾಜಿ ಸದಸ್ಯ ಶಿವಾನಂದ ಜಗತಿ ಮಾತನಾಡಿ, “ಪಟ್ಟಣ ಪಂಚಾಯಿತಿಯ 19 ಮಂದಿ ಸದಸ್ಯರು ಒಟ್ಟಾಗಿ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಸ್ವರೂಪ ಬದಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ನೇತೃತ್ವ ವಹಿಸಿದ್ದ ಪ್ರಭು ವಾಲೀಕಾರ, ಗಾಲಿಬಸಾಬ ಜಾತ್ರಾ ಕಮಿಟಿ ಅಧ್ಯಕ್ಷ ಬಸವರಾಜ ತೆಲ್ಲೂರ ಮಾತನಾಡಿದರು. ಸ್ವಯಂ ಪ್ರೇರಿತವಾಗಿ ವ್ಯಾಪಾರಿಗಳು ಅಂಗಡಿಗಳನ್ನು ಬಂದ್‌ ಮಾಡಿ, ಬೆಂಬಲ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯಾವುದೇ ಸಮಯದಲ್ಲೂ ಲಿಂಗನಮಕ್ಕಿಯಿಂದ ನೀರು ಬಿಡುಗಡೆ; ಸ್ಥಳೀಯರಿಗೆ KPCL ಎಚ್ಚರಿಕೆ

ಹೋರಾಟದಲ್ಲಿ ಪಟ್ಟಣ ಪಂಚಾಯತ್ ಸದಸ್ಯ ಸಂಜೀವಕುಮಾರ ಎಂಟಮಾನ, ಅಶೋಕ ಕೊಳಾರಿ, ಚಂದು ಹಳೆಮನಿ, ಚಂದು ಕಾಂಬಳೆ, ಮಲ್ಲು ಆಚಲೇರಿ, ಮುಖಂಡರಾದ ಬಸವರಾಜ ಹೂಗಾರ, ಶಿವು ಮೇಲಿನಮನಿ, ಶಶಿ ನಾಲ್ನೋಡಿ, ರವಿ ವಾರದ, ಶ್ರೀಶೈಲ ಆಗಸರ, ನಾಗಪ್ಪ ತಳವಾರ, ಅಹಮ್ಮದ ವಾಲಿಕಾರ, ವಾಹಬ ಸುಂಬಡ, ಪಿ ಟಿ ಪಾಟೀಲ, ಯಲ್ಲಪ್ಪ ಬುರಡ, ಬೀಮ ಕಲಕುಟಗೇರ, ಶಿವು ತಳವಾರ, ಶಶಿಧರ ಗಣಿಯಾರ, ನಾಗಪ್ಪ ತಳವಾರ, ಶ್ರೀಶೈಲ ಭೋವಿ, ಮದನ ರಜಪೂತ, ಶ್ರೀಶೈಲ ಕುಂಬಾರ, ಮಲ್ಲು ಜ್ಯೋತಿ, ನಿಂಬಾಜಿ ಚೋರಮಲ್ಲ ಸಿದ್ದು ಬಂಡಗಾರ, ಕರೆಪ್ಪ ಪೂಜಾರಿ ಸೇರಿದ್ದಂತೆ ಪಟ್ಟಣದ ಎಲ್ಲ ಸಮಾಜದವರೂ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...